ಚಿಕ್ಕಬಳ್ಳಾಪುರ: ಮನೆಯಲ್ಲಿ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಇಂದಿರಾನಗರದಲ್ಲಿ ನಡೆದಿದೆ.
ಆರತಿ ಹಿರೇಮಠ್(35) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಅಂದಹಾಗೆ ನ್ಯಾಯಾಲಯದಲ್ಲಿ ಎಫ್‍ಡಿಎ ಆಗಿದ್ದ ಆರತಿ ಹಿರೇಮಠ್ ಕೆಲಸ ಮಾಡುತ್ತಿದ್ದರು. ಗಂಡ ರಾಮಕೃಷ್ಣಯ್ಯ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಶಿಕ್ಷಕನಿಂದ ಲೈಂಗಿಕ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಮೂಲತಃ ಬೆಂಗಳೂರಿನ ನಾಗಸಂದ್ರ ಬಳಿಯ ತಿಪ್ಪೇನಹಳ್ಳಿಯಲ್ಲಿ ಪತಿ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರೆ, ಪತ್ನಿ ಚಿಕ್ಕಬಳ್ಳಾಪುರ ನಗರದ ಇಂದಿರಾ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮನೆಯಲ್ಲಿ ಆರತಿ ಆತ್ಮಹತ್ಯೆಗೆ ಶರಣಾಗಿದ್ದು ಕಾರಣ ತಿಳಿದುಬಂದಿಲ್ಲ. ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರತಿ ಅವರ ಗಂಡ ಬಂದ ನಂತರ ಬಾಗಿಲು ತೆರೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್