ಚೆನ್ನೈ: ಮದುವೆಯಾದ ಒಂದೇ ತಿಂಗಳಿಗೆ ವಿವಾಹಿತ ಮಹಿಳೆ 10ನೇ ತರಗತಿ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
26 ವರ್ಷದ ಮಹಿಳೆ ಸೆಲಮ್ ತಿರುವಗೌಂಡನೂರು ಗ್ರಾಮದವಳಾಗಿದ್ದು, ಈಕೆ ಖಾಸಗಿ ಟ್ಯುಟೋರಿಯಲ್ ನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ಮಹಿಳೆಗೆ ನವೆಂಬರ್ 19 ರಂದು ಬಾಗಲಪಟ್ಟಿ ನಿವಾಸಿ ಜೊತೆ ಮದುವೆ ಮಾಡಲಾಗಿತ್ತು.
ಮಹಿಳೆಯ ಪತಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಮದುವೆ ಬಳಿಕ ಪತಿ ಕೆಲಸಕ್ಕಾಗಿ ಚೆನ್ನೈಗೆ ಹೋಗಿದ್ದರು. ಈ ವೇಳೆ ಮಹಿಳೆ ತನ್ನ ತವರು ಮನೆಯಲ್ಲಿಯೇ ಉಳಿದುಕೊಂಡಿದ್ದು, ಒಂದು ಟ್ಯುಟೋರಿಯಲ್ ನಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿಕೊಂಡಿದ್ದಳು. ಅಲ್ಲಿಗೆ ಬರುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯನ್ನು ಪ್ರೀತಿ ಮಾಡಿ ಆತನೊಂದಿಗೆ ಪರಾರಿಯಾಗಿದ್ದಾಳೆ.
ಇತ್ತ ಕೆಲಸಕ್ಕೆ ಹೋದ ಮಗಳು ಮನೆಗೆ ಬಂದಿಲ್ಲ ಎಂದು ಎಲ್ಲ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿಲ್ಲ. ಕೊನೆಗೆ ಕುಟುಂಬದವರು ಸೂರಮಂಗಲಂ ಪೊಲೀಸ್ ಠಾಣೆಗೆ ಹೋಗಿ ನಾಪತ್ತೆ ದೂರು ದಾಖಲಿಸಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ಕು ದಿನಗಳ ನಂತರ ಆಕೆಗಾಗಿ ಶೋಧ ನಡೆಸಿದ್ದಾರೆ. ಆದರೆ ಆಕೆ ಎಲ್ಲೂ ಪತ್ತೆಯಾಗಲಿಲ್ಲ.
ಒಂದು ದಿನ ಆಕೆಯೇ 17 ವರ್ಷದ ಹುಡುಗನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಾಳೆ. ಇದನ್ನು ನೋಡಿದ ಪೊಲೀಸರು ದಂಗಾಗಿದ್ದು, ತಕ್ಷಣ ಪೊಲೀಸರು ಇಬ್ಬರು ಮನೆಯವರಿಗೆ ಕರೆ ಮಾಡಿ ಠಾಣೆಗೆ ಕರೆಸಿದ್ದಾರೆ. ಈ ವೇಳೆ ಮಹಿಳೆ ನಾವಿಬ್ಬರು ಪ್ರೀತಿ ಮಾಡುತ್ತಿದ್ದು, ಒಟ್ಟಿಗೆ ಬದುಕಲು ಇಷ್ಟಪಟ್ಟಿದ್ದೇವೆ ಎಂದು ಹೇಳಿದ್ದಾಳೆ. ಇದರಿಂದ ಪೋಷಕರು ಗಾಬರಿಗೊಂಡಿದ್ದಾರೆ. ನಂತರ ಪೊಲೀಸರು ಇಬ್ಬರಿಗೂ ಕೌನ್ಸಿಲಿಂಗ್ ಮಾಡಿ ಮನೆಗೆ ಕಳುಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv