ಜೈಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿವಾಹಿತ ಮಹಿಳೆಯನ್ನು ದುಷ್ಕರ್ಮಿಗಳು ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.
ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಪುರ ಚೆಕ್ ಪೋಸ್ಟ್ನಿಂದ ಕೇವಲ 500 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಇಬ್ಬರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ
Advertisement
Advertisement
ವಿವಾಹಿತ ಮಹಿಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಮೂವರು ಯುವಕರು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ದಾರಿ ಮಧ್ಯೆ ಆಕೆಯನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಇಬ್ಬರು ಯುವಕರು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಡಾನ್ಸ್ ಮಾಡಿದ ವಧುವಿನ ಕೆನ್ನೆಗೆ ಹೊಡೆದ ವರ- ಮದುವೆ ಮುರಿದು ಬಿತ್ತು
Advertisement
Advertisement
ದೂರು ದಾಖಲಸಿಕೊಂಡಿರುವ ಪೊಲೀಸರು. ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಗಳು ಸುತ್ತಮುತ್ತಲಿನ ಊರಿನವರು ಎಂದು ತಿಳಿದು ಬಂದಿದೆ. ಈ ವಿಚಾರವಾಗಿ ತನಿಖೆ ನಡೆಸುತ್ತೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.