ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Public TV
1 Min Read
suicide kodagu

ಮಡಿಕೇರಿ: ಮನೆಯಲ್ಲಿ ಯಾರೂ‌ ಇಲ್ಲದ ಸಂದರ್ಭದಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ನೆಲಜಿ ಗ್ರಾಮದ ನಿವಾಸಿ ಮುಂಡಂಡ ಪ್ರಭು ಪೆಮ್ಮಯ್ಯ ಅವರ ಪತ್ನಿ ಡೀನಾ ಪೆಮ್ಮಯ್ಯ (27) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶನಿವಾರ ತನ್ನ 9 ವರ್ಷದ ಹೆಣ್ಣು ಮಗುವನ್ನು ತವರು ಮನೆಯಲ್ಲಿ ಬಿಟ್ಟು ನೆಲಜಿ ಗ್ರಾಮದಲ್ಲಿರುವ ಗಂಡನ ಮನೆಯಲ್ಲಿ ಯಾರೂ ಇಲ್ಲದ ಸಮಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲಿ ಸಿಕ್ಕ ಶಾಸನಕ್ಕೂ, ಕೋಲಾರಮ್ಮ ದೇವಾಲಯದ ಶಾಸನಕ್ಕೂ ಇದೆ ಲಿಂಕ್!

ಪೋಲೀಸರ ಪರಿಶೀಲನೆ ವೇಳೆ ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಕ್ರೈಂ ಪಿಎಸ್ಐ ಶ್ರೀಧರ, ಮಹಿಳಾ ಸಿಬ್ಬಂದಿ ಪೂರ್ಣಿಮ, ಚಾಲಕ ಷರೀಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಡೀನಾ ಪೆಮ್ಮಯ್ಯ ಅವರ ತಂದೆ ಪೂಣಚ್ಚ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಕಾರ್ಯಕ್ರಮದ ನಡುವೆ ಯತೀಂದ್ರ ಸಿದ್ದರಾಮಯ್ಯಗೆ ಅವಾಚ್ಯ ಶಬ್ದಗಳಿಂದ ನಿಂದನೆ – ವ್ಯಕ್ತಿ ಬಂಧನ

Share This Article