ಚಿಕ್ಕಬಳ್ಳಾಪುರ: 54 ವರ್ಷದ ತಾತನ ಜೊತೆ 24 ವರ್ಷದ ವಿವಾಹಿತ ಮಹಿಳೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ.
ಮಕ್ಕಳಾಗಿಲ್ಲ ಅಂತ ದೇವರ ಮೊರೆ ಹೋಗಿದ್ದ ಮಹಿಳೆ (Women) ಕೊನೆಗೆ ಪೂಜಾರಿ ಜೊತೆಯೇ ಎಸ್ಕೇಪ್ ಆಗಿದ್ದಾಳೆ. ವಿವಾಹಿತ ಮಹಿಳೆ ಲಲಿತಾ ಗಂಗಮ್ಮ ದೇವಾಲಯದ ಪೂಜಾರಿ ಮುನಿರಾಜು ಚಿಕ್ಕಬಳ್ಳಾಪುರ ತಾಲೂಕಿನ ಕಡಶೀಗೇನಹಳ್ಳಿ ಗ್ರಾಮದ ನಿವಾಸಿಗಳು. ಇದನ್ನೂ ಓದಿ: ಅನೈತಿಕ ಸಂಬಂಧ; ಹೆತ್ತ ಮಗನನ್ನು ಕೊಲೆ ಮಾಡಿದ ತಾಯಿಗೆ ಜೀವಾವಧಿ ಶಿಕ್ಷೆ
ಬನ್ನಿಕುಪ್ಪೆ ಗ್ರಾಮದ ಬಳಿ ಅಮಾನಿಗೋಪಾಲಕೃಷ್ಣ ಕೆರೆ ದಡದಲ್ಲಿ ಬಟ್ಟೆ, ಚಪ್ಪಲಿ, ಮೊಬೈಲ್ ಪತ್ತೆಯಾಗಿದ್ದು ಒಂದು ತಿಂಗಳ ಬಳಿಕ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದರಿಂದ ಲಲಿತಾ-ಮುನಿರಾಜು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರಾ? ಪೊಲೀಸರ ದಿಕ್ಕು ತಪ್ಪಿಸಲು ನಾಟಕ ಆಡಿದ್ರಾ? ಅನ್ನೋ ಅನುಮಾನ ಹುಟ್ಟಿಕೊಂಡಿದೆ. ಕೆರೆಯಲ್ಲಿ ಮೃತದೇಹಗಳಿಗಾಗಿ ಶೋಧಕಾರ್ಯ ನಡೆದಿದೆ.
ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ (Chikkaballapur Police Station) ಲಲಿತಾ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಇದೀಗ ಆತ್ಮಹತ್ಯೆ ಕಥೆ ನಾಟಕ ಮಾಡಿದ್ದ ಕಿಲಾಡಿ ಜೋಡಿ ಅರೆಸ್ಟ್ ಆಗಿದೆ. ಇದನ್ನೂ ಓದಿ: ಅಂದು ಬ್ರಿಟಿಷರು ಭಾರತದ ಸಂಪತ್ತನ್ನ ಹೊತ್ತೊಯ್ದರು, ಇಂದು ಬಂಡವಾಳಿಗರ ಬಳಿ ಶೇಖರಣೆಗೊಳ್ತಿದೆ: ಸಿದ್ದರಾಮಯ್ಯ
Web Stories