ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ʻಮಾರ್ಟಿನ್ʼ ಸಿನಿಮಾವನ್ನು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಾಡಿರುವ ಈ ಸಿನಿಮಾ ದೇಶಾದ್ಯಂತ ಅಬ್ಬರಿಸಲಿದೆ ಎಂದೇ ಹೇಳಲಾಗುತ್ತಿದೆ. ಸಿನಿಮಾ ರಿಲೀಸ್‌ಗಾಗಿ ಧ್ರುವ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆದರೀಗ ವಂಚನೆ ವಿಚಾರವಾಗಿ ‘ಮಾರ್ಟಿನ್’ ಸಿನಿಮಾ ವಿವಾದದ ಕೇಂದ್ರಬಿಂದುವಾಗಿದೆ. ʻಡಿಜಿಟಲ್ ಟೆರೆನ್ʼ ಎಂಬ ಸಂಸ್ಥೆ ವಿರುದ್ಧ ‘ಮಾರ್ಟಿನ್’ ನಿರ್ಮಾಪಕ ಉದಯ್ ಕೆ ಮೆಹ್ತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಮಧ್ಯೆ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧವೂ 50 ಲಕ್ಷ ರೂ. ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪಕ್ಕೆ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಎ.ಪಿ ಅರ್ಜುನ್ ಸ್ಪಷ್ಟನೆ ಕೊಟ್ಟಿದ್ದಾರೆ.
Advertisement
ನನ್ನನ್ನ ಪೊಲೀಸ್ ಸ್ಟೇಷನ್‌ಗೆ ಕರೆದಿದ್ದ ಉದ್ದೇಶ ಏನಂದರೆ, ಸತ್ಯಾ ರೆಡ್ಡಿ ಅನ್ನೋನು ನನ್ನ ಮೇಲೆ ಆರೋಪ ಮಾಡಿದ್ದಾನೆ. ಅದಕ್ಕೆ ಪೊಲೀಸರು ನಮ್ಮನ್ನೆಲ್ಲ ವಿಚಾರಣೆಗೆ ಕರೆದಿದ್ದರು. ನನ್ನ ಮೇಲೆ ಯಾಕೆ ಆರೋಪ ಮಾಡಿದ್ದಾನೆ ಅಂತ ಗೊತ್ತಿಲ್ಲ. ಆದರೆ, ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು ಎಂಬುದು ಗೊತ್ತಾಗಿದೆ. ನನಗೆ ಅಷ್ಟೊಂದು ದುಡ್ಡು ಕೊಟ್ಟಿದ್ದರೆ, ಏನಾದರೂ ಒಂದು ದಾಖಲೆ ಇರಬೇಕಿತ್ತಲ್ಲವಾ? ಅಂತಾ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್ ಪ್ರವೇಶಿಸಿದ ಭಾರತ!
Advertisement
Advertisement
ನನಗೂ ಮಾಧ್ಯಮದ ಮೂಲಕ ವಿಷಯ ಗೊತ್ತಾಯ್ತು. 50 ಲಕ್ಷ ರೂ., 75 ಲಕ್ಷ ರೂ. ಕಮಿಷನ್ ತಗೊಂಡಿದ್ದೀನಿ ಅಂತ ಆರೋಪಿಸಿ ನನ್ನನ್ನ ಕಮಿಷನ್ ಡೈರೆಕ್ಟರ್ ಅಂತೆಲ್ಲಾ ಹೇಳಿದ್ರು. ಈ ಪ್ರಕರಣದಲ್ಲಿ ಸತ್ಯ ರೆಡ್ಡಿ, ಸುನೀಲ್ ರೆಡ್ಡಿ ಇಬ್ಬರೂ ಆರೋಪಿಗಳು. ಆ ಎಫ್‌ಐಆರ್‌ನಲ್ಲೂ ನನ್ನ ಹೆಸರು ಇರಲಿಲ್ಲ.. ನನ್ನ ಮೇಲಿನ ಆರೋಪ ಸುಳ್ಳು ಅಂತ ಒತ್ತಿ ಹೇಳಿದರಲ್ಲದೇ ಅತ್ಯರೆಡ್ಡಿ ರವಿಶಂಕರ್‌ಗೂ 10 ಲಕ್ಷ ರೂ. ಮೋಸ ಮಾಡಿದ್ದಾರೆ, ಕಾಟೇರ ಸಿನಿಮಾಗೂ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು
Advertisement
ಇನ್ನೂ ನಿರ್ಮಾಪಕರ ಜೊತೆಗಿನ ಮನಸ್ತಾಪದ ಬಗ್ಗೆ ಮಾತನಾಡಿದ ಎಪಿ ಅರ್ಜುನ್, ʻದೊಡ್ಡ ಸಿನಿಮಾ ಅಂದ್ಮೇಲೆ ಜಗಳ, ಮನಸ್ತಾಪ ಇದ್ದೇ ಇರುತ್ತದೆ. ನನ್ನ ಮೇಲೆ ಮಾತ್ರ ಅವನು (ಸತ್ಯಾ ರೆಡ್ಡಿ) ಆರೋಪ ಮಾಡಿಲ್ಲ. ನಮ್ಮ ಕ್ಯಾಮರಾಮ್ಯಾನ್, ಎಡಿಟರ್ ಹಾಗೂ ಸಹಾಯಕ ನಿರ್ದೇಶಕನ ಮೇಲೂ ಆರೋಪ ಮಾಡಿದ್ದಾನೆ. ಪೊಲೀಸರ ಮುಂದೆ ನಾನು ಏನೇನು ಹೇಳಬೇಕಿತ್ತೋ, ಎಲ್ಲಾ ಹೇಳಿದ್ದೇನೆ. ಪೊಲೀಸರ ತನಿಖೆಗೆ ಸಹಕರಿಸುತ್ತೇನೆ. ಅಕ್ಟೋಬರ್ 11 ರಂದು ‘ಮಾರ್ಟಿನ್’ ಪಕ್ಕಾ ರಿಲೀಸ್ ಆಗುತ್ತೆ’’ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್
ನನಗೂ – ಉದಯ್ ಮೆಹ್ತಾ ಮಧ್ಯೆ ಬೇರೆ ವಿಚಾರಕ್ಕೆ ಮನಃಸ್ತಾಪ ಆಗಿತ್ತು. ಆದ್ರೆ ಸತ್ಯ ರೆಡ್ಡಿ ನನ್ನ ಹೆಸ್ರು ಹಾಳು ಮಾಡೋಕೆ ಟ್ರೈ ಮಾಡ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಅಂದಾಗ ಬಜೆಟ್ ಡಿಫರೆನ್ಸ್ ಬರುತ್ತೆ, ಆದ್ರೆ ಈ ಸಿನಿಮಾದಲ್ಲಿ ಅದೂ ಕೂಡ ಜಾಸ್ತಿ ಆಗಿಲ್ಲ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮ