Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್‌ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್‌ ಅಂತ್ಯಕ್ರಿಯೆ

Districts

ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್‌ ಅಂತ್ಯಕ್ರಿಯೆ

Public TV
Last updated: January 1, 2025 8:11 pm
Public TV
Share
2 Min Read
Kodagu
SHARE

ಮಡಿಕೇರಿ: ‌ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಹುತಾತ್ಮರಾದ ಕೊಡಗಿನ ಯೋಧ (Kodagu Soldiers) ದಿವಿನ್‌ ಅವರ ಅಂತ್ಯಕ್ರಿಯೆ ಬುಧವಾರ ಹುಟ್ಟೂರಿನಲ್ಲಿ ನೆರವೇರಿತು.

ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಸಾಂಪ್ರದಾಯಿಕ ವಿಧಿ ವಿಧಾನ ನೆರವೇರಿಸಿದ ನಂತರ ಮಾಲಂಬಿಯ ಜಮೀನಿನಲ್ಲಿ ಚಿತೆಗೆ ಅಗ್ನಿಸ್ಪರ್ಶ ಮಾಡುವುದರೊಂದಿಗೆ ದಿವಿನ್ ಪಂಚಭೂತಗಳಲ್ಲಿ ಲೀನವಾದರು. ಇದನ್ನೂ ಓದಿ:  ಅಶ್ವಮೇಧ ಕುದುರೆಯ ಓಟಕ್ಕೆ ಪ್ರಶಸ್ತಿಗಳ ಸುರಿಮಳೆ – KSRTCಗೆ 9 ಬಹುಮಾನ

Kodagu 2

ಇದಕ್ಕೂ ಮೊದಲು ಮೇಜರ್ ನಿಖಿಲ್ ಹಾಗೂ ಸುಬೇದಾರ್ ಮಹೇಶ್ ಜಾಧವ್ ಅವರ ನೇತೃತ್ವದಲ್ಲಿ ಆಗಮಿಸಿದ್ದ ಭಾರತೀಯ ಸೇನಾ ತಂಡ ಹಾಗೂ ಪೊಲೀಸರು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿದರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೇನಾ ವಾಹನದ ಮೂಲಕ ಕುಶಾಲನಗರಕ್ಕೆ ತರಲಾಗಿತ್ತು. ಬುಧವಾರ ಬೆಳಗ್ಗೆ 8 ರಿಂದ 11 ಗಂಟೆ ವರೆಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿತ್ತು. ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಾಚರಣೆ – ಒಂದೇ ದಿನದಲ್ಲಿ ಬಿಎಂಟಿಸಿಗೆ ಬಂತು 5.48 ಕೋಟಿ ರೂ.

Kodagu 3

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶಿಲ್ದಾರ್ ಕಿರಣ್ ಗೌರಯ್ಯ, ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ವಿ.ಪಿ ಶಶಿಧರ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ ಬೇಬಿಮ್ಯಾಥ್ಯು, ಕುಶಾಲನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಮುಖ್ಯ ಶಿಕ್ಷಕರು ಸೇರಿದಂತೆ ಹಲವರು ದಿವಿನ್ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚವಿರಿಸಿ ಅಂತಿಮ ನಮನ ಸಲ್ಲಿಸಿದರು.

ಬಳಿಕ ದಿವಿನ್ ಪಾರ್ಥಿವ ಶರೀರವನ್ನು ಕೂಡಿಗೆ, ಹೆಬ್ಬಾಲೆ ಮಾರ್ಗವಾಗಿ ಹುಟ್ಟೂರಾದ ಆಲೂರು ಸಿದ್ದಾಪುರಕ್ಕೆ ತರಲಾಯಿತು. ಅಲ್ಲಿ ದಿವಿನ್‌ ಓದಿದ್ದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶಾಸಕ ಡಾ.ಮಂತರ್ ಗೌಡ ಅವರು ಸಾರ್ವಜನಿಕರ ದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಸಿದ್ದರು.

Kodagu Soldier

ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ ಬೋಪಯ್ಯ, ಮಾಜಿ ಸಚಿವ ಎಂ.ಪಿ ಅಪ್ಪಚ್ಚು ರಂಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರೊಬೆಷನರಿ ಎಸ್‌.ಪಿ ಬೆನಕ ಪ್ರಸಾದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ತಹಶೀಲ್ದಾರ್ ಶ್ರೀಧರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಸದಸ್ಯ ಸೂದನ ಈರಪ್ಪ, ಚಂದ್ರಾವತಿ ಬಡ್ಡಡ್ಕ, ಪ್ರಮುಖರಾದ ಎಚ್.ಎಸ್ ಚಂದ್ರಮೌಳಿ ಇತರರು ಅಂತಿಮ ನಮನ ಸಲ್ಲಿಸಿದರು.

ಇನ್ನೂ ಸಾಂಪ್ರದಾಯಿಕ ವಿಧಿ-ವಿಧಾನಗಳನ್ನು ಹುತಾತ್ಮ ಯೋಧ ದಿವಿನ್ ಕುಟುಂಬದ ಸಂಬಂಧಿ ಚಿರಾಗ್ ನೆರವೇರಿಸಿದರು. ದಿವಿನ್‌ ತಾಯಿ ಜಲಜಾಕ್ಷಿ ಅಂತಿಮ ದರ್ಶನ ಪಡೆದ ಬಳಿಕ ಚಿತೆಗೆ ಅಗ್ನಿಸ್ಪರ್ಶ ನೀಡಲಾಯಿತು.

TAGGED:ಅಂತ್ಯಕ್ರಿಯೆಕೊಡಗಿನ ಯೋಧಕೊಡಗುದಿವಿನ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
9 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
16 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
35 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
55 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
1 hour ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?