ನವದೆಹಲಿ: ಮಾರುತಿ ಸುಜುಕಿ ಇಂಡಿಯಾ(Maruti Suzuki India) ಸಿಯಾಜ್, ಬ್ರೆಝಾ, ಎರ್ಟಿಗಾ, ಎಕ್ಸ್‌ಎಲ್ 6 ಮತ್ತು ಗ್ರ್ಯಾಂಡ್ ವಿಟಾರಾ ಸೇರಿ ಒಟ್ಟು 9,125 ಕಾರುಗಳನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ತಿಳಿಸಿದೆ.
ನವೆಂಬರ್ 2 ರಿಂದ 28ರವರೆಗಿನ ಅವಧಿಯಲ್ಲಿ ಉತ್ಪಾದನೆಯಾದ ಕಾರುಗಳಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಈ ಕಾರುಗಳನ್ನು ಹಿಂದಕ್ಕೆ ಪಡೆಯಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.
Advertisement
Advertisement
ಮುಂಭಾಗದ ಸಾಲಿನ ಸೀಟ್ ಬೆಲ್ಟ್‌ಗಳ(Seat Belt) ಭುಜದ ಎತ್ತರ ಹೊಂದಾಣಿಕೆಯ ಜೋಡಣೆಯ ಸಣ್ಣ ಭಾಗದಲ್ಲಿ ಒಂದು ಸಂಭವನೀಯ ದೋಷವಿದೆ ಎಂದು ಶಂಕಿಸಲಾಗಿದೆ. ಇದು ಅಪರೂಪದ ಸಂದರ್ಭದಲ್ಲಿ ಸೀಟ್ ಬೆಲ್ಟ್ ಬೇರ್ಪಡಿಸಬಹುದು ಎಂದು ಹೇಳಿದೆ. ಇದನ್ನೂ ಓದಿ: ಟ್ವಿಟ್ಟರ್ ಉದ್ಯೋಗಿಗಳಿಗೆ ಬಿಡುವಿಲ್ಲದ ಕೆಲಸ – ಕಚೇರಿಯಲ್ಲೇ ಮಲಗಲು ಬೆಡ್‌ರೂಂಗಳನ್ನೂ ಸಿದ್ಧಪಡಿಸಿದ ಮಸ್ಕ್
Advertisement
ದೋಷಪೂರಿತ ವಾಹನಗಳನ್ನು ತಪಾಸಣೆ ಮತ್ತು ದೋಷಪೂರಿತ ಭಾಗವನ್ನು ಉಚಿತವಾಗಿ ಹಿಂಪಡೆಯಬಹುದು. ವಾಹನದ ಮಾಲೀಕರ ಜೊತೆ ಕಂಪನಿ ಸಂವಹನ ನಡೆಸಲಿದೆ ಎಂದು ತಿಳಿಸಿದೆ.