– ಹಾಲಿ ಅಧ್ಯಕ್ಷ ರನಿಲಾ ವಿಕ್ರಮಸಿಂಘೆಗೆ ಸೋಲು
ಕೊಲಂಬೊ: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾರ್ಕ್ಸ್‌ವಾದಿ ಶಾಸಕ ಅನುರಾ ಕುಮಾರ ದಿಸ್ಸಾನಾಯಕೆ (Anura Kumara Dissanayake) ಗೆಲುವು ಸಾಧಿಸಿದ್ದಾರೆ. ಹಾಲಿ ಅಧ್ಯಕ್ಷರಾಗಿದ್ದ ರನಿಲಾ ವಿಕ್ಸಮಸಿಂಘೆ (Ranil Wickremesinghe) ಸೋಲನುಭವಿಸಿದ್ದಾರೆ.
Advertisement
ದಿಸ್ಸಾನಾಯಕೆ ಅವರು 42.31 ಶೇಕಡಾ ಮತಗಳನ್ನು ಗಳಿಸಿದ್ದಾರೆ. ಎಡಪಂಥೀಯ ಒಕ್ಕೂಟವಾದ ಪೀಪಲ್ಸ್ ಲಿಬರೇಶನ್ ಫ್ರಂಟ್ (ಜೆವಿಪಿ) ಯ ನಾಯಕ ದಿಸ್ಸಾನಾಯಕೆ ಗೆಲುವು ದಾಖಲಿಸಿದ್ದಾರೆ. ಅಧಿಕೃತ ಫಲಿತಾಂಶ ಪ್ರಕಟವಾಗಬೇಕಿದೆ. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ
Advertisement
Advertisement
ಕೊಲಂಬೊದ ವಸಾಹತುಶಾಹಿ ಯುಗದ ಅಧ್ಯಕ್ಷೀಯ ಕಾರ್ಯದರ್ಶಿ ಕಚೇರಿಯಲ್ಲಿ ಸೋಮವಾರ ದಿಸ್ಸಾನಾಯಕೆ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಅವರ ಗೆಲುವು, ದೇಶದ ಆರ್ಥಿಕ ಕುಸಿತಕ್ಕೆ ಕಾರಣವಾದ ರಾಜಕೀಯ ವ್ಯವಸ್ಥೆಯ ನಿರಾಕರಣೆಯನ್ನು ಸೂಚಿಸುತ್ತದೆ. 2019 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಕೇವಲ 3 ಪ್ರತಿಶತದಷ್ಟು ಮತಗಳನ್ನು ಪಡೆದಿದ್ದ ಜೆವಿಪಿಗೆ ಈ ಗೆಲುವು ಪ್ರಮುಖ ರಾಜಕೀಯ ತಿರುವನ್ನು ನೀಡಿದೆ.
Advertisement
ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟು ಈಗ ಚೇತರಿಸಿಕೊಳ್ಳುತ್ತಿರುವ ಶ್ರೀಲಂಕಾದ ಜನರು ಹೊಸ ಅಧ್ಯಕ್ಷರ ಆಯ್ಕೆಗೆ ಶನಿವಾರ ಮತ ಚಲಾಯಿಸಿದ್ದರು. ಶೇ.76 ರಷ್ಟು ಮತದಾನವಾಗಿತ್ತು. ಇದನ್ನೂ ಓದಿ: ಲೆಬನಾನ್ ಪೇಜರ್ ಸ್ಫೋಟದ ಹಿಂದೆ ಟ್ಯಾಲೆಂಟೆಡ್ ಬ್ಯೂಟಿ!
ಎರಡು ವರ್ಷಗಳ ಹಿಂದೆ ಗೊಟಬಯ ರಾಜಪಕ್ಸ ಆಡಳಿತದ ವಿರುದ್ಧ ಜನರು ದಂಗೆಯೆದ್ದಿದ್ದರು. ಪರಿಣಾಮವಾಗಿ ರಾಜಪಕ್ಸ ಪಲಾಯನಗೈದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ನಂತರ ನಡೆದ ಮೊದಲ ಚುನಾವಣೆ ಇದಾಗಿತ್ತು.