ಚಿತ್ರರಂಗದ ‘ಮರ್ಯಾದೆ ಪ್ರಶ್ನೆ’ ಅಂತಿದ್ದಾರೆ ಆಲ್ ಓಕೆ- ಸಕ್ಕತ್ ಸ್ಟುಡಿಯೋದ ಮತ್ತೊಂದು ಪ್ರಯತ್ನ

Public TV
2 Min Read
all ok

ಸ್ಯಾಂಡಲ್‌ವುಡ್‌ನಲ್ಲಿ (Sandalwood) ಇತ್ತೀಚೆಗೆ ಸಖತ್ ಸುದ್ದಿ ಆಗ್ತಿರೋದು ‘ಮರ್ಯಾದೆ ಪ್ರಶ್ನೆ’. ಹೌದು ‘ಸಕ್ಕತ್ ಸ್ಟುಡಿಯೋ’ ಮೂಲಕ ಆರ್ ಜೆ ಪ್ರದೀಪ್ ಅವರು ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾದ ಹೆಸರೇ ಮರ್ಯಾದೆ ಪ್ರಶ್ನೆ. ಸಕ್ಕತ್ ಕಂಟೆಂಟ್ ಗಳ ಮೂಲಕವೇ ಪ್ರೇಕ್ಷಕರ ಗಮನಸೆಳೆಯುತ್ತಿರುವ ಸಕ್ಕತ್ ಸ್ಟುಡಿಯೋ ನಮ್ಮ ಚಿತ್ರರಂಗದ ಸೆಲಿಬ್ರಿಟಿಸ್ ಅವರವರ ಜೀವನದ ‘ಮರ್ಯಾದೆ ಪ್ರಶ್ನೆ’ (Maryade Prashane) ಬಗ್ಗೆ ಪೋಸ್ಟ್ ಮಾಡುವ ಮೂಲಕ ಶೀರ್ಷಿಕೆ ಬಿಡುಗಡೆ ಮಾಡಿದ್ದರು.

all ok

ಆರ್ ಜೆ ಪ್ರದೀಪ್ ಪ್ರದೀಪ್ ಒಡೆತನದ ಸಕ್ಕತ್ ಸ್ಟುಡಿಯೋ ಬಹಳ ಕ್ರಿಯೇಟಿವ್ ಆಗಿ ‘ಮರ್ಯಾದೆ ಪ್ರಶ್ನೆ’ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. ಆರ್‌ಸಿಬಿ ಕಪ್ ಗೆಲ್ಬೇಕು ಅಂತಾ ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೋ ಈಗ ಆಲ್ ಓಕೆ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್ಯಾಪರ್ ಆಲ್ ಓಕೆ (All Ok) ಮಿಡಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು, ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿ ಇದೀಗ ರಿಲೀಸ್ ಮಾಡಿದೆ. ಇದನ್ನೂ ಓದಿ:‘ಮ್ಯಾಕ್ಸ್’ ಸಿನಿಮಾ ರಿಲೀಸ್ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸುದೀಪ್

all ok 1

ಈ ಹಾಡಿನ ಮೂಲಕ ಕನ್ನಡ ಚಿತ್ರರಂಗದ ಎಲ್ಲರಿಗೂ ‘ಒಗ್ಗಟ್ಟಾಗಿ ದುಡಿಯುವ ಬೆಳೆಯುವ ಹಾಗೂ ಸ್ಟಾರ್ ಸಿನಿಮಾಗಳ ಜೊತೆಗೆ ಹೊಸ ಪ್ರಯತ್ನಗಳಿಗೂ ಜನ ಜೈ ಎನ್ನಬೇಕು. ಇದು ಬರೀ ಮರ್ಯಾದೆ ಪ್ರಶ್ನೆ ಅಲ್ಲಾ ನಮ್ಮೆಲ್ಲರ ಉಳಿವಿನ ಪ್ರಶ್ನೆ’ ಎಂಬ ಗಟ್ಟಿ ಕೂಗೊಂದನ್ನು ನೀಡಿದ್ದಾರೆ.

‘ಮರ್ಯಾದೆ ಪ್ರಶ್ನೆ’ ಸಿನಿಮಾದ ನಿರ್ಮಾಣದ ಜೊತೆಗೆ ಪ್ರದೀಪ್ ಕತೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಆಗಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ‘ಮರ್ಯಾದೆ ಪ್ರಶ್ನೆ’ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ.

ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಯಾರೆಲ್ಲ ಇದ್ದಾರೆ ಅನ್ನೋ ಕುತೂಹಲ ಇದೆ. ಕನ್ನಡದ ಅದ್ಭುತ ಕಲಾವಿದರ ದಂಡೇ ಇದರಲ್ಲಿದೆ ಎಂಬ ಮಾಹಿತಿಯಿದೆ. ಅತಿ ಶೀಘ್ರದಲ್ಲೇ ಆ ವಿವರಗಳನ್ನು ಜನರಿಗೆ ನೀಡುವ ತಯಾರಿಯಲ್ಲಿದ್ದಾರೆ.

Share This Article