ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎಫೆಕ್ಟ್ ಈಗ ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೂ ತಟ್ಟಿದೆ. ಬೆಂಗಳೂರಿನ ಟೆಕ್ಕಿಯೊಬ್ಬರಲ್ಲಿ ಕೊರೊನಾ ಪತ್ತೆಯಾಗಿದೆ ಎನ್ನುವ ಸುದ್ದಿ ಕೇಳಿದ ದಿನದಂದಿಲೂ ನಗರದ ಟ್ರಾಫಿಕ್ ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.
ಟೆಕ್ಕಿಗೆ ಕೊರೊನಾ ವೈರಸ್ ಪತ್ತೆಯಾದಾಗಿನಿಂದ ಪೊಲೀಸರು ಯಾವುದೇ ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಕೂಡ ಮಾಡಿರಲಿಲ್ಲ. ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವಾಗ ವಾಹನ ಸವಾರರ ಬಳಿ ತೀರ ಹತ್ತಿರಕ್ಕೆ ಹೋಗಿ ಚೆಕ್ ಮಾಡಬೇಕಾಗುತ್ತೆ. ಒಂದು ವೇಳೆ ಆ ವ್ಯಕ್ತಿಗೆ ಕೊರೊನಾ ಇದ್ದರೆ ಅದು ನಮಗೂ ಬರುತ್ತೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕೈದಿಗಳಿಗೂ ತಟ್ಟಿದ ಮಹಾಮಾರಿ ಕೊರೊನಾ ಎಫೆಕ್ಟ್
Advertisement
Advertisement
ಅಲ್ಲದೆ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ, ನಗರದಲ್ಲಿ ಕೆಲಸ ಮಾಡುವ ಎಲ್ಲಾ ಟ್ರಾಫಿಕ್ ಪೊಲೀಸರಿಗೂ ಇಲಾಖಾ ವತಿಯಿಂದ ಮಾಸ್ಕ್ ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು, ಬೆಂಗಳೂರಿನಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವ ಎಲ್ಲಾ ಸಿಬ್ಬಂದಿಗೂ ಮಾಸ್ಕ್ ನೀಡಿದೆ.
Advertisement
ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಮಾಸ್ಕ್ ಹಾಕಿಕೊಂಡು ಎಲ್ಲಾ ಟ್ರಾಫಿಕ್ ಪೊಲೀಸರು ಡಿಡಿ ಚೆಕ್ ಮಾಡಿದ್ದರು. ಮಾಸ್ಕ್ ಇದ್ದರು ಕೂಡ ಕೆಲವರು ವಾಹನ ಸವಾರರ ತೀರಾ ಹತ್ತಿರಕ್ಕೆ ಹೋಗೋಕೆ ಹಿಂದೇಟು ಹಾಕ್ತಿರೋದು ಕಂಡುಬಂತು.