ಬೆಂಗಳೂರು: ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿ ಮಾಸ್ಕ್ (Mask) ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ (Health Minister K Sudhakar) ಸೂಚಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, H3N2 ನಿಂದ ದೇಶದಲ್ಲಿ ಸೋಂಕು ಹೆಚ್ಚಳವಾಗಿದೆ. ಅನೇಕರು ಗಾಬರಿಯಾಗಿದ್ದಾರೆ. ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಿದೆವು. ಗಾಬರಿಯಾಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಹಾಗಂತ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದರು.
Advertisement
Advertisement
ಮಾಸ್ಕ್ ಧರಿಸೋದು ಇತ್ತೀಚೆಗೆ ಕಡಿಮೆಯಾಗಿದೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಧರಿಸುತ್ತಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಅಲ್ಲದೆ ಇನ್ ಫ್ಲ್ಯೂಯೆಂಜಾಗೆ ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಆರೋಗ್ಯ ಸಿಬ್ಬಂದಿಗೆ ಸಚಿವರು ಸೂಚಿಸಿದರು. ಇದನ್ನೂ ಓದಿ: ನೈತಿಕತೆ ಇದ್ರೆ ಸಿಎಂ ರಾಜೀನಾಮೆ ಕೊಡಬೇಕು – ಆರ್.ಧ್ರುವನಾರಾಯಣ್
Advertisement
Advertisement
ಐಸಿಯುನಲ್ಲಿ ಕೆಲಸ ಮಾಡೋರಿಗೆ ಸರ್ಕಾರದಿಂದಲೇ ವ್ಯಾಕ್ಸಿನ್ (Vaccine) ನೀಡಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲಿ ಐಸಿಯುನಲ್ಲಿ ಕೆಲಸ ಮಾಡುವ ಸಿಬ್ಬಂದಿ ಇನ್ ಫ್ಲ್ಯೂಯೆಂಜಾ ಸರ್ಕಾರದ ವತಿಯಿಂದ ವ್ಯಾಕ್ಸಿನ್ ನೀಡಲಾಗುತ್ತದೆ. 25 ಟೆಸ್ಟ್‍ಗಳನ್ನು ವಾಣಿವಿಲಾಸ ಮತ್ತು ವಿಕ್ಟೋರಿಯಾದಲ್ಲಿ ಟೆಸ್ಟಿಂಗ್ ಮಾಡಲಾಗುತ್ತದೆ. 15 ವರ್ಷ ಕೆಳಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಸುಲಭವಾಗಿ ಸೋಂಕು ಬರುತ್ತೆ. ಗರ್ಭಿಣಿಯರಿಗೆ ಸೋಂಕು ಬರುವ ಸಾಧ್ಯತೆ ಇದೆ. ಹೀಗಾಗಿ ಇವರೆಲ್ಲ ಎಚ್ಚರಿಕೆ ವಹಿಸಬೇಕು. ಶುಚಿತ್ವದ ಬಗ್ಗೆ ಗಮನ ಕೊಡಬೇಕು. ಕೆಮ್ಮುವಾಗ, ಸೀನುವಾಗ ಮುಖ ಕವರ್ ಮಾಡಿಕೊಳ್ಳಬೇಕು. ಕೈಯನ್ನು ಆಗಾಗ ಸೋಪಿನಿಂದ ತೊಳೆದುಕೊಳ್ಳಬೇಕು ಎಮದು ಹೇಳಿದರು.
ಹೆಚ್1 ಎನ್ 1- 20 ಕೇಸ್, ಹೆಚ್ 3 ಎನ್ 2 – 26 ಕೇಸ್ ಇದೆ. ಆಂಟಿಬಯೋಟಿಕ್ ತೆಗೆದುಕೊಳ್ಳಬೇಡಿ. ಫೆಬ್ರವರಿಯಲ್ಲಿಯೇ ತಾಪಮಾನ ಹೆಚ್ಚಾಗಿದೆ. ಹವಾಮಾನ ವೈಪರೀತ್ಯವೂ ಕಾರಣವಾಗಿದೆ. ಹೀಟ್ ವೇವ್ ನಿಂದ ಜನ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. 11 ರಿಂದ 3 ಗಂಟೆ ಅನಗತ್ಯವಾಗಿ ಬಿಸಿಲಿಗೆ ನೇರವಾಗಿ ಹೋಗಬೇಡಿ. ಹೀಟ್ ವೇವ್ ನಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಹೆಚ್ಚು ನೀರು ಕುಡಿಯಿರಿ. ಮಜ್ಜಿಗೆ ಎಳನೀರು ಸೇವಿಸಿ ಎಂದು ಸಚಿವರು ಸಲಹೆ ನೀಡಿದರು.
ಹೆಚ್ 3 ಎನ್ 2 ನಿಂದ ಡೆತ್ ಕೇಸ್ ಇಲ್ಲ. ಕೋವಿಡ್ ಬಂದವರಿಗೆ ಈ ವೈರಸ್ ಬಂದಾಗ ದೀರ್ಘಕಾಲಿಕ ಕೆಮ್ಮು ಬರುತ್ತೆ. ಪ್ರತ್ಯೇಕ ಮಾರ್ಗಸೂಚಿ ಇರುತ್ತೆ. ಕೋವಿಡ್ ಟೆಸ್ಟ್ ಮಾದರಿಯಲ್ಲಿ ಟೆಸ್ಟಿಂಗ್ ಇರುತ್ತೆ. ಕೆಲ ಆಸ್ಪತ್ರೆಯವರು ಮೂರೂವರೆ ಸಾವಿರ ತಗೋತಾರೆ. ಹೀಗಾಗಿ ಟೆಸ್ಟಿಂಗ್ ದರ ನಿಗದಿ ಮಾಡ್ತೀವಿ ಎಂದರು.