CoronaLatestMain PostNational

ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ – ಹಾಕದಿದ್ದರೆ 500 ರೂ. ದಂಡ

ನವದೆಹಲಿ: ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದೇ ಇದ್ದರೆ ದಂಡ ಪ್ರಯೋಗಕ್ಕೆ ಸರ್ಕಾರ ನಿರ್ಧರಿಸಿದೆ.

ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಏರಿಕೆ ಕಾಣಿತ್ತಿದೆ. ಈಗಾಗಲೇ ದೇಶದಲ್ಲಿ 4ನೇ ಅಲೆ ಭೀತಿ ಕಾಡಲಾರಂಭಿಸಿದೆ. ಹಾಗಾಗಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ಜೊತೆಗಿನ ಸಭೆ ಬಳಿಕ ಸರ್ಕಾರ ಮಾಸ್ಕ್ ಧರಿಸುವುದು ಕಡ್ಡಾಯ ಮತ್ತು ಧರಿಸದೇ ಇದ್ದರೆ 500 ರೂ. ದಂಡ ಪ್ರಯೋಗಿಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಸಚಿವರು ಭಾಗವಹಿಸಿದ್ದರು. ಸಭೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಪ್ರಮುಖ ಕಾರಣ ಮತ್ತು ಮುಂದಿನ ನಡೆ ಬಗ್ಗೆ ಚರ್ಚಿಸಲಾಯಿತು. ಈಗಾಗಲೇ ಈ ಹಿಂದೆ ಇದ್ದಂತಹ ಕಟ್ಟುನಿಟ್ಟಿನ ಕ್ರಮಗಳನ್ನು ಮತ್ತೊಮ್ಮೆ ರಾಜ್ಯದಲ್ಲಿ ಹೇರಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಬುಲ್ಡೋಜರ್‌ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್‌

ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಎಂಬ ನಿಯಮ ಸಡಿಲಗೊಂಡಿತ್ತು. ಇದೀಗ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿ ಜೊತೆಗೆ ಮೆಟ್ರೋ ನಿಲ್ದಾಣ, ಮಾರ್ಕೆಟ್ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಟೆಸ್ಟ್ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಬಿ.1.10 ಮತ್ತು ಬಿ.1.12 ರೂಪಾಂತರಿ ವೈರಸ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

Leave a Reply

Your email address will not be published.

Back to top button