ಮುಂಬೈ: ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಮೌಲಾನ ಅಲ್ಲ, ಅವನೊಬ್ಬ ಸೈತಾನ್. ಪಾಕಿಸ್ತಾನ ನೆನಪಿಟ್ಟುಕೊಳ್ಳಬೇಕಿದೆ. ಭಾರತದ ಪ್ರಜೆಗಳು ಒಂದೇ ಎಂದು ಆಲ್ ಇಂಡಿಯಾ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಪುಲ್ವಾಮಾ ದಾಳಿಯ ಹೊಣೆಯನ್ನು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿದೆ. ಈ ದಾಳಿಗೆ ರಾಜಕೀಯ, ಅಧಿಕಾರಿಗಳು ಹಾಗೂ ಗುಪ್ತಚರ ಇಲಾಖೆಯ ವಿಫಲತೆಯೇ ಕಾರಣ ಎಂದು ದೂರಿದರು.
Advertisement
ಪುಲ್ವಾಮಾ ದಾಳಿಗೆ ಪಾಕಿಸ್ತಾನವೇ ಹೊಣೆಯಾಗಬೇಕು. ನೆರೆಯ ದೇಶಗಳು ಭಾರತೀಯ ಮುಸ್ಲಿಮರ ಬಗ್ಗೆ ಯೋಚನೆ ಮಾಡುವುದು ಬೇಡ. ಪಾಕಿಸ್ತಾನ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ನಿರ್ಲಕ್ಷಿಸಿಯೇ ನಾವು ಇಲ್ಲಿ ಉಳಿದಿದ್ದು ಎಂದು ಹೇಳಿದರು.
Advertisement
A Owaisi: We would like to tell Pakistan PM don't give that message to India which you want to, by sitting before a TV camera. You started this, it wasn't a first attack. There was Pathankot,Uri&now Pulwama. We would like to tell Pakistan PM to drop his mask of innocence. (23.02) pic.twitter.com/M5ae0nBuB2
— ANI (@ANI) February 23, 2019
Advertisement
ಪುಲ್ವಾಮಾ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಬಹುದೊಡ್ಡ ವಿಫಲತೆ ಎಂದು ಕಿಡಿಕಾರಿದರು.
Advertisement
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅಸಾದುದ್ದೀನ್ ಓವೈಸಿ, ಪಾಕಿಸ್ತಾನ ಹಾಗೂ ಜೈಷ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ವಿರುದ್ಧ ಹರಿಹಾಯ್ದರು.
ಮಹಾರಾಷ್ಟ್ರದ ಆಡಳಿತ ಪಕ್ಷ (ಬಿಜೆಪಿ) ಹಾಗೂ ವಿರೋಧ ಪಕ್ಷ (ಕಾಂಗ್ರೆಸ್) ಎರಡು ದೂಷಿಗಳೇ. ಈ ಎರಡು ಪಕ್ಷಗಳು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಮುಸ್ಲಿಮರು ಕಾಂಗ್ರೆಸ್‍ಗೆ ಬೆಂಬಲ ನೀಡಬಾರದು. ಏಕೆಂದರೆ ಅವರಿಂದ ನಮ್ಮ ಸಮುದಾಯಕ್ಕೆ ತೊಂದರೆಗಳು ಉಂಟಾಗುತ್ತಿವೆ ಎಂದು ಆರೋಪಿಸಿದರು.
Asaduddin Owaisi: This attack has links to Pakistan. It was done as per plan of Pakistan govt, Pakistan Army & ISI. I would like to tell the outfit that killed our 40 men & claimed its responsibility – you're not Jaish-e-Mohammed, you are Jaish-e-Shayateen. #PulwamaAttack (23.02) pic.twitter.com/IO5bkztzUC
— ANI (@ANI) February 23, 2019
ಮಹಾರಾಷ್ಟ್ರದಲ್ಲಿ ಭರೀಪ್ ಬಹುಜನ್ ಮಹಸಂಗ್ ಅಧ್ಯಕ್ಷ ಹಾಗೂ ದಲಿತ ನಾಯಕ ಪ್ರಕಾಶ್ ಅಂಬೇಡ್ಕರ್ ಹಾಗೂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೈತ್ರಿ ಮಾಡಿಕೊಂಡಿದ್ದು, ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಭಾರೀ ಸಿದ್ಧತೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv