ದಾವಣಗೆರೆ: ನರ್ಸಿಂಗ್ ಪರೀಕ್ಷೆಯಲ್ಲಿ (Exam) ವಿದ್ಯಾರ್ಥಿಗಳು ಸಾಮೂಹಿಕವಾಗಿ ನಕಲು (Mass Copy) ಮಾಡುತ್ತಿದ್ದ ವೇಳೆ ಏಕಾಏಕಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಕಾಲೇಜಿಗೆ ದಾಳಿ ನಡೆಸಿದ ಘಟನೆ ದಾವಣಗೆರೆಯ (Davanagere) ಆಂಜನೇಯ ಬಡಾವಣೆಯಲ್ಲಿರುವ ಸಂಜೀವಿನಿ ನರ್ಸಿಂಗ್ ಕಾಲೇಜಿನಲ್ಲಿ (Sanjeevini Nursing College) ನಡೆದಿದೆ.
ಸೋಮವಾರ ನರ್ಸಿಂಗ್‌ನ ಪರೀಕ್ಷೆ ಇದ್ದ ಹಿನ್ನೆಲೆ ಕೊಠಡಿಯ ಒಳಗೆ ವಿದ್ಯಾರ್ಥಿಗಳು ಅನಟಾಮಿ ವಿಷಯದ ಪರೀಕ್ಷೆ ಬರೆಯುತ್ತಿದ್ದರು. ಅಲ್ಲಿದ್ದ ಸಿಬ್ಬಂದಿಯೊಬ್ಬ ಮೊಬೈಲ್‌ನಲ್ಲಿ ಉತ್ತರಗಳನ್ನು ತರಿಸಿಕೊಂಡು, ವಿದ್ಯಾರ್ಥಿಗಳಿಗೆ ಪರೀಕ್ಷೆ ನಕಲು ಮಾಡಲು ಹೇಳಿ ಕೊಡುತ್ತಿದ್ದ. ಅಲ್ಲದೆ ನಕಲು ಮಾಡಲು ಕಾಲೇಜು ಸಿಬ್ಬಂದಿ ಸಾಥ್ ನೀಡಿದ್ದರು ಎಂಬ ಗಂಭೀರ ಆರೋಪ ಬಂದಿದೆ.
ವರದಿಗಳ ಪ್ರಕಾರ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ನೀಡಲು ಪ್ರತಿಯೊಬ್ಬರಿಂದ 10 ಸಾವಿರ ರೂ. ಹಣ ವಸೂಲಿ ಮಾಡಲಾಗಿದೆ ಎನ್ನಲಾಗಿದೆ. ಹಣ ನೀಡಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಿ ಅವರಿಗೆ ಮಾತ್ರ ಉತ್ತರ ಹೇಳಿಕೊಡುತ್ತಿದ್ದರು. ಇದನ್ನೂ ಓದಿ: ಪತ್ರಕರ್ತರ 37ನೇ ರಾಜ್ಯ ಸಮ್ಮೇಳನಕ್ಕೆ ಡಾ.ವೀರೇಂದ್ರ ಹೆಗ್ಗಡೆಗೆ ಆಹ್ವಾನ
ವಿದ್ಯಾರ್ಥಿಗಳು ಮೊಬೈಲಿನಲ್ಲಿ ಪರೀಕ್ಷೆ ನಕಲು ಮಾಡಿ ಬರೆಯುತ್ತಿದ್ದ ವೇಳೆಯೇ ಸಿಕ್ಕಿಹಾಕಿಕೊಂಡಿದ್ದು, ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ನಮ್ಮಲ್ಲಿ ನಕಲು ನಡೆದಿಲ್ಲ ಎಂದು ವಾದ ಮಾಡಿದ್ದಾರೆ. ಕಾಲೇಜು ಸಿಬ್ಬಂದಿಯೇ ನಕಲು ಮಾಡಲು ಅವಕಾಶ ನೀಡಿದರೆ ಸಾಮಾನ್ಯ ವಿದ್ಯಾರ್ಥಿಗಳ ಗತಿ ಏನು ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇದನ್ನೂ ಓದಿ: ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು, ಅದನ್ನು ಸಹಿಸಲಸಾಧ್ಯ: ಕಾಗೇರಿ