ವಾಷಿಂಗ್ಟನ್: ಟೆಸ್ಲಾ ಸಿಇಒ ಎಲೋನ್ ಮಸ್ಕ್ (Elon Musk) ಟ್ವಿಟ್ಟರ್ (Twitter) ಅನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೂ ಮೊದಲೇ ಅದರ ಅನಗತ್ಯ ಉದ್ಯೋಗಿಗಳನ್ನು (Employees) ಸಾಮೂಹಿಕವಾಗಿ ವಜಾಗೊಳಿಸುವ (Layoff) ಬಗ್ಗೆ ತಿಳಿಸಿದ್ದರು. ಇದೀಗ ಮಸ್ಕ್ ಟ್ವಿಟ್ಟರ್‌ನ ಮಾಲೀಕನಾಗಿ 1 ವಾರ ಕಳೆದಿದ್ದು, ಉದ್ಯೋಗಿಗಳನ್ನು ವಜಾಗೊಳಿಸಲು ಈಗಿಂದಲೇ ಪ್ರಾರಂಭಿಸುವ ಸುಳಿವು ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಈ ಬಗ್ಗೆ ಕಂಪನಿ ತನ್ನ ಉದ್ಯೋಗಿಗಳಿಗೆ ಮೇಲ್ ಮಾಡಿದೆ. ಅದರಲ್ಲಿ ಟ್ವಿಟ್ಟರ್ ಅನ್ನು ಆರೋಗ್ಯಕರ ಹಾದಿಯಲ್ಲಿ ಇರಿಸುವ ಪ್ರಯತ್ನವಾಗಿ ನಾವು ಜಾಗತಿಕವಾಗಿ ಉದ್ಯೋಗಿಗಳನ್ನು ಕಡಿತಗೊಳಿಸುವ ಪ್ರಕ್ರಿಯೆಯನ್ನು ಕೈಗೊಳ್ಳುವುದಾಗಿ ತಿಳಿಸಲಾಗಿದೆ.
Advertisement
Advertisement
ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನ ಮಾಲೀಕರ ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ ಈ ಸಾಮೂಹಿಕ ವಜಾದ ಮಾರ್ಗವನ್ನು ಅನುಸರಿಸಲಾಗುತ್ತಿದೆ ಎಂಬುದು ವರದಿಯಾಗಿದೆ. ಆದರೂ ಟ್ವಿಟ್ಟರ್‌ನ ಎಷ್ಟು ಉದ್ಯೋಗಿಗಳು ವಜಾಗೊಳ್ಳುತ್ತಾರೆ ಎಂಬ ಬಗ್ಗೆ ಮಾಹಿತಿಯಿಲ್ಲವಾದರೂ ಕಂಪನಿಯಲ್ಲಿ ಈಗಾಗಲೇ ಇರುವ ಅರ್ಧದಷ್ಟು ಉದ್ಯೋಗಿಗಳು ಕಡಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲೂ ಸಂಚಾರ ಆರಂಭಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್ – ನ.11ಕ್ಕೆ ಮೋದಿ ಚಾಲನೆ
Advertisement
Advertisement
ವರದಿಗಳ ಪ್ರಕಾರ ಟ್ವಿಟ್ಟರ್‌ನ ಎಲ್ಲಾ ಕಚೇರಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಹಾಗೂ ಉದ್ಯೋಗಿ ಬ್ಯಾಡ್ಜ್ ಪ್ರವೇಶವನ್ನು ಅಮಾನತುಗೊಳಿಸಲಾಗುವುದು ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ. ಇದು ಟ್ವಿಟ್ಟರ್‌ನ ಪ್ರತಿ ಉದ್ಯೋಗಿ, ಟ್ವಿಟ್ಟರ್‌ನ ವ್ಯವಸ್ಥೆ ಹಾಗೂ ಗ್ರಾಹಕರ ಡೇಟಾವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡಲಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಪಾವತಿಸಿ: ಎಲೋನ್ ಮಸ್ಕ್