DharwadDistrictsKarnatakaLatestMain Post

ಕೋಟಿ ಕಂಠ ಗಾಯನದಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿದ ಪ್ರಹ್ಲಾದ್‌ ಜೋಶಿ

ಧಾರವಾಡ: ಅರವತ್ತೇಳನೇ ಕನ್ನಡ ರಾಜ್ಯೋತ್ಸವದ(Kannada Rajyotsava) ಅಂಗವಾಗಿ ಹಮ್ಮಿಕೊಂಡಿರುವ ಕೋಟಿ ಕಂಠ ಕನ್ನಡ ಗಾಯನದಲ್ಲಿ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ(Pralhad Joshi) ಕುಣಿದು ಸಂಭ್ರಮಿಸಿದರು. ಕನ್ನಡದ ಕಂಪನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಈ ವಿಶೇಷ ಕಾರ್ಯಕ್ರಮವನ್ನು ಸರ್ಕಾರ ಆಯೋಜಿಸಿದ್ದು, ಜಗತ್ತಿನ ಮೂಲೆ ಮೂಲೆಗಳಲ್ಲಿ ಏಕಕಾಲಕ್ಕೆ ಕನ್ನಡದ ಗಾನ ಮೊಳಗಿಸಿದ್ದಕ್ಕೆ ಕೇಂದ್ರ ಸಚಿವ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದರು.‌

ಕರ್ನಾಟಕ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅನೇಕ ಕಡೆಗಳಲ್ಲಿ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ವಿಶೇಷ ಕಾರ್ಯಕ್ರಮಗಳಲ್ಲಿ ಧಾರವಾಡದಿಂದ ಪ್ರಹ್ಲಾದ್‌ ಜೋಶಿ ಅವರು ಪಾಲ್ಹೊಂಡಿದ್ದರು. ಸಾವಿರಾರು ಯುವ ಕನ್ನಡಿಗ ಮಿತ್ರರೊಂದಿಗೆ ಕ‌ನ್ನಡ ಹಾಡಿಗೆ ಜೋಶಿ ಅವರು ಹೆಜ್ಜೆ ಹಾಕಿದರು. ಈ ಮೂಲಕ ಕನ್ನಡದ ಕಂಪನ್ನ ಹೆಚ್ಚು ಪಸರಿಸುವ ನಿಟ್ಟಿಲ್ಲಿ ಉತ್ಸುಕರಾಗಿದ್ದ ಯುವಕರಿಗೆ ಪ್ರೇರಣೆ ನೀಡಿದರು. ಇದನ್ನೂ ಓದಿ: 67ನೇ ಕನ್ನಡ ರಾಜ್ಯೋತ್ಸವ – ಸುವರ್ಣ ಸೌಧದಲ್ಲಿ ಕೋಟಿ ಕಂಠ ಗಾಯನ

ಕನ್ನಡ ನಾಡು ನುಡಿಯ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಇದೇ ವೇಳೆ ಸಂದೇಶ ನೀಡಿದ ಕೇಂದ್ರ ಸಚಿವರು ಎಲ್ಲರೂ ಒಟ್ಟಾಗಿ ಕನ್ನಡ ಗಾಯನ ಪ್ರದರ್ಶನ ಮಾಡುವಂತೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ‌

Live Tv

Leave a Reply

Your email address will not be published. Required fields are marked *

Back to top button