ಮಹದೇಶ್ವರ ಬೆಟ್ಟದಲ್ಲಿಇಂದು ಸಾಮೂಹಿಕ ವಿವಾಹ – ಸಿಎಂ ಆಗಿರುವವರೆಗೂ ಪ್ರತಿ ಬಾರಿ ಬರ್ತೀನಿ ಎಂದಿದ್ದ ಸಿದ್ದರಾಮಯ್ಯ ಗೈರು

Public TV
1 Min Read
mass wedding at Mahadeshwara Betta CM Siddaramaiah absent Chamarajanagar 1

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ (Mahadeshwara Betta) ಇಂದು ಸಾಮೂಹಿಕ ವಿವಾಹ (Mass Marriage) ನಡೆಯಲಿದ್ದು ಸಿಎಂ ಸಿದ್ದರಾಮಯ್ಯ (CM Siddaramaiah) ಗೈರಾಗಲಿದ್ದಾರೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆಗೊಂಡಿದೆ. 64 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು ಸಕಲ ಸಿದ್ಧತೆ ನಡೆದಿದೆ. ಇದನ್ನೂ ಓದಿ: ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಕೈತಪ್ಪುತ್ತೆ ಅನ್ನೋದು ಮೌಢ್ಯ: ಸಿದ್ದರಾಮಯ್ಯ

mass wedding at Mahadeshwara Betta CM Siddaramaiah absent Chamarajanagar 2

ಕಳೆದ ವರ್ಷ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ನಾನು ಸಿಎಂ ಆಗಿರುವವರೆಗೂ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬರುತ್ತಲೇ ಇರುತ್ತೇನೆ ಎಂದು ತಿಳಿಸಿದ್ದರು.

ಈಗ ಮುಡಾ ಹಗರಣ (MUDA Scam) ಸಂಬಂಧ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಸಿದ್ದರಾಮಯ್ಯ ಅವರ ಪ್ರವಾಸದ ಪಟ್ಟಿ ಬದಲಾಗಿದೆ.

ಪ್ರಾಧಿಕಾರದ ವತಿಯಿಂದ ಚಿನ್ನದ ಮಾಂಗಲ್ಯ, ಕಾಲುಂಗುರ ಹಾಗೂ ವರನಿಗೆ ವಸ್ತ್ರ ವಿತರಣೆ ಮಾಡಲಾಗುತ್ತದೆ. ಮಾದಪ್ಪನ ದೇವಾಲಯ ಎದುರು ಇರುವ ರಂಗ ಮಂದಿರದಲ್ಲಿ ಮದುವೆಯ ಸಿದ್ದತೆ ನಡೆಸಿದೆ. ಸಚಿವರಾದ ರಾಮಲಿಂಗಾರೆಡ್ಡಿ, ಸಚಿವ ವೆಂಕಟೇಶ್ ಸೇರಿದಂತೆ ಸ್ಥಳೀಯ ಶಾಸಕರು ಭಾಗವಹಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ: ಹಿತಶತ್ರುಗಳ ಬಗ್ಗೆ ಸಿಎಂಗೆ ಆರ್‌.ಅಶೋಕ್‌ ಎಚ್ಚರಿಕೆ

ಇಂದು ಸಿಎಂ ಸಿದ್ದರಾಮಯ್ಯನವರು ಆಲಮಟ್ಟಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಣೆ ಮಾಡಲಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿ ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಾಲ್‌ ಬಹಾದ್ದೂರು ಶಾಸ್ತ್ರಿ ಜಲಾಶಯಯ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ.

 

Share This Article