ಗ್ಯಾಂಗ್ಟಾಕ್: ಸಿಕ್ಕಿಂನ (Sikkim) ನಾಥುಲಾ (Nathula) ಪ್ರದೇಶದಲ್ಲಿ ಮಂಗಳವಾರ ಭಾರೀ ಹಿಮಪಾತ (Avalanche) ಉಂಟಾಗಿದ್ದು, ಘಟನೆಯಲ್ಲಿ 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಿಕ್ಕಿಂನ ಭಾರತ-ಚೀನಾ ಗಡಿಯ ಸಮೀಪವಿರುವ ಎತ್ತರದ ಪರ್ವತದ ಹಾದಿಯಾದ ನಾಥುಲಾ ಬಳಿ ಮಧ್ಯಾಹ್ನ 12:20ರ ವೇಳೆಗೆ ಹಿಮಪಾತ ಸಂಭವಿಸಿದೆ. ಈ ಪ್ರದೇಶ ಸಮುದ್ರ ಮಟ್ಟದಿಂದ 4,310 ಮೀ. (14,140 ಅಡಿ) ಎತ್ತರದಲ್ಲಿದೆ ಮತ್ತು ಇದು ಪ್ರಮುಖ ಪ್ರವಾಸಿ ತಾಣವಾಗಿದೆ.
Advertisement
Advertisement
ವರದಿಗಳ ಪ್ರಕಾರ 150ಕ್ಕೂ ಹೆಚ್ಚು ಪ್ರವಾಸಿಗರು 15 ಮೈಲುಗಳಷ್ಟು ಮುಂದೆ ಸಾಗಿದ್ದು, ಅಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಹಿಮದ ಅಡಿಯಲ್ಲಿ ಸಿಲುಕಿದ ಸುಮಾರು 30 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ರಾಜ್ಯ ರಾಜಧಾನಿ ಗ್ಯಾಂಗ್ಟನ್‌ನ ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅವಘಡ ತಪ್ಪಿಸಲು ರೈಲನ್ನೇ ನಿಲ್ಲಿಸಿದ ದಿಟ್ಟ ಮಹಿಳೆ!
Advertisement
ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ನಾಪತ್ತೆಯಾದವರ ಹುಡುಕಾಟದಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಪ್ರಸ್ತುತ ಸಿಕ್ಕಿಂ ಪೊಲೀಸರು, ಸಿಕ್ಕಿಂನ ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮತ್ತು ವಾಹನ ಚಾಲಕರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 47 ಜನ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಪ್ರಯಾಣಿಕರು ಬಚಾವ್