ಹಾವೇರಿ: ವೆಲ್ಡಿಂಗ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗೆ ಬೆಂಕಿ (Fire) ತಗುಲಿದ ಘಟನೆ ಹಾವೇರಿಯ (Haveri) ಆಲದಕಟ್ಟೆ ಗ್ರಾಮದಲ್ಲಿ ನಡೆದಿದೆ. ಪರಿಣಾಮ 1.5 ಕೋಟಿ ರೂ. ಮೌಲ್ಯದ ಪಟಾಕಿ ಬೆಂಕಿಗೆ ಆಹುತಿಯಾಗಿದೆ.
ಘಟನೆಯ ವೇಳೆ ವೆಲ್ಡಿಂಗ್ ಮಾಡುತ್ತಿದ್ದ ಕಾರ್ಮಿಕ ಹರಿರಾಮ್ (32) ಎಂಬುವವರು ಕೆಳಗೆ ಬಿದ್ದು ಬೆನ್ನಿಗೆ ಪೆಟ್ಟಾಗಿದೆ. ಅಲ್ಲದೇ ನಾಲ್ಕು ಬೈಕ್‍ಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಆಗಮಿಸಿರುವ ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅಲ್ಲದೇ ಗ್ರಾಮೀಣ ಪೊಲೀಸರು (Police) ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸತತ ಮೂರು ಗಂಟೆಯಿಂದ ಬೆಂಕಿ ನಂದಿಸಲು ಪ್ರಯತ್ನಿಸಲಾಗುತ್ತಿದೆ. ತೀವ್ರ ಪಟಾಕಿ ಸದ್ದಿನಿಂದ ಜನ ಗಾಬರಿಗೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ಸೆಕ್ಯುರಿಟಿ ಗಾರ್ಡ್ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ – ಚಿಕಿತ್ಸೆ ಫಲಕಾರಿಯಾಗದೇ ಸಾವು
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ಹಾಗೂ ದೀಪಾವಳಿ ಹಬ್ಬದ ಸಲುವಾಗಿ ಶಿವಕಾಶಿಯಿಂದ ತರಿಸಿದ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು. ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ವೇಳೆ ಓರ್ವ ಕಾರ್ಮಿಕನಿಗೆ ಗಾಯವಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನ ಯಾವಾಗ? – ಕಾಲಮಿತಿ ತಿಳಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
Web Stories