ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಚಶೋತಿ (Chashoti) ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರಿ ಮೇಘಸ್ಫೋಟದಿಂದ (Massive Cloudburst) ಹಠಾತ್ ಪ್ರವಾಹ ಉಂಟಾಗಿ ಭಾರೀ ಸಾವು, ನೋವು ಸಂಭವಿಸಿದೆ.
ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ಯಾತ್ರಿಕರನ್ನು ಸ್ಥಳಾಂತರ ಮಾಡುತ್ತಿದ್ದಾರೆ. ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಚೈಲ್ ಮಾತಾ ಯಾತ್ರೆಯ ಆರಂಭಿಕ ಸ್ಥಳ ಚಶೋತಿಯಾಗಿದೆ. ಹಠಾತ್ ಪ್ರವಾಹದ ನಂತರ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#Cloudburst at #Chishoti village of #Padder Sub Division in J&K’s #Kishtwar enroute to Machail Mata Yatra, casualties feared — Further Detail Awaited #MachailMataYatra pic.twitter.com/ock2t0bmJU
— newspointJ&K (@NewspointjK) August 14, 2025
ಮಚೈಲ್ ಮಾತಾ ಯಾತ್ರೆಯ ಆರಂಭಿಕ ಸ್ಥಳವಾದ ಕಿಶ್ತ್ವಾರ್‌ನ ಚಶೋತಿ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನರೇಶ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ VIP ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್ – ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ
ಮೇಘಸ್ಫೋಟ ಪೀಡಿತ ಪ್ರದೇಶಕ್ಕೆ ಎರಡು ತಂಡಗಳನ್ನು ರವಾನಿಸಲಾಗಿದೆ ಎಂದು ಎನ್‌ಡಿಆರ್‌ಎಫ್ (NDRF) ತಿಳಿಸಿದೆ.
BREAKING: Cloudburst in Chositi area of Padder, Kishtwar, Jammu and Kashmir. NDRF teams, helicopters on the site #Cloudburst #JammuAndKashmir pic.twitter.com/YwHe2P1QGN
— Vani Mehrotra (@vani_mehrotra) August 14, 2025
ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನ ಸಂಸದರೂ ಆಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ಮೇಘಸ್ಫೋಟವು ಭಾರೀ ಪ್ರಮಾಣದಲ್ಲಿ ಸಂಭವಿಸಿದೆ. ಶೀಘ್ರದಲ್ಲೇ ನಮಗೆ ಹೆಚ್ಚಿನ ವಿವರಗಳು ತಿಳಿಯಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು. ವೈದ್ಯಕೀಯ ಚಿಕಿತ್ಸೆಗಾಗಿ ಆಡಳಿತವು ಹೆಲಿ-ರಕ್ಷಣಾ ವ್ಯವಸ್ಥೆಗಳನ್ನು ಸಹ ಮಾಡುತ್ತದೆ ಎಂದಿದ್ದಾರೆ.