– ವಿವಿ ಸಿಬ್ಬಂದಿಯಿಂದಲೇ ದೋಖಾ; ತನಿಖಾ ತಂಡ ರಚನೆ
ಬಳ್ಳಾರಿ: ನಕಲಿ ಘಟಿಕೋತ್ಸವ (Convocation) ಪ್ರಮಾಣ ಪತ್ರ ನೀಡಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣ ಬಳ್ಳಾರಿಯ (Ballari) ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ (Sri Krishnadevaraya University) ನಡೆದಿರುವುದು ಬೆಳಕಿಗೆ ಬಂದಿದೆ.
Advertisement
ವಿವಿಯಿಂದ ವಿದ್ಯಾರ್ಥಿಗಳ ವ್ಯಾಸಂಗ ಮುಗಿದ ಬಳಿಕ ಘಟಿಕೋತ್ಸವ ಪ್ರಮಾಣ ಪತ್ರ ನೀಡಲಾಗುತ್ತದೆ. ಈ ಘಟಿಕೋತ್ಸವ ಪ್ರಮಾಣ ಪತ್ರ ನೀಡುವಲ್ಲಿ ವಿಎಸ್‌ಕೆ ವಿವಿಗೆ ಬರಬೇಕಿದ್ದ ಲಕ್ಷ ಲಕ್ಷ ರೂ. ಆದಾಯಕ್ಕೆ ವಿವಿ ಸಿಬ್ಬಂದಿಯಿಂದಲೇ ಕನ್ನ ಹಾಕಲಾಗಿದೆ. ಇದನ್ನೂ ಓದಿ: ದೆಹಲಿ ವಿಧಾನಸಭೆಯಲ್ಲಿ ಗದ್ದಲ – 15 ಎಎಪಿ ಶಾಸಕರ ಅಮಾನತು
Advertisement
Advertisement
ಪ್ರಮುಖವಾಗಿ ವಿಎಸ್‌ಕೆ ವಿವಿಯ ಕುಲಪತಿ, ಕುಲಸಚಿವರ ಸಹಿಯನ್ನೇ ನಕಲು ಮಾಡಿ, ಘಟಿಕೋತ್ಸವ ಪ್ರಮಾಣ ಪತ್ರಗಳನ್ನ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ. ಒಂದೊಂದು ಪ್ರಮಾಣ ಪತ್ರಕ್ಕೆ 10 ರಿಂದ 15 ಸಾವಿರ ರೂ. ಹಣ ಪಡೆದು ನೂರು ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣ ಪತ್ರ ವಿತರಿಸಿ ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿದೆ.
Advertisement
ನಿಯಮದ ಪ್ರಕಾರ ಪದವಿ, ಸ್ನಾತಕ ಪದವಿ ಬಳಿಕ ಘಟಿಕೋತ್ಸವ ಪ್ರಮಾಣ ಪತ್ರ ಪಡೆಯಲು ಶುಲ್ಕ ಪಾವತಿಸಬೇಕು. ಘಟಿಕೋತ್ಸವ ಶುಲ್ಕವು ವಿವಿಗೆ ಸೇರಬೇಕು. ಆದರೆ ವಿವಿಯ ಕೆಲ ಸಿಬ್ಬಂದಿ ತಮ್ಮ ಜೇಬಿಗೆ ಹಾಕಿಕೊಂಡು ವಂಚನೆ ಮಾಡಿದ್ದಾರೆ. ಇದನ್ನೂ ಓದಿ: ಜಾಗರಣೆ ಮಾಡಿದ್ದಕ್ಕೆ ಶಿವರಾತ್ರಿ ಮರುದಿನ ಹಿಂದೂ ಉದ್ಯೋಗಿಗಳಿಗೆ ರಜೆ ಕೊಡಿ: ಸರ್ಕಾರಕ್ಕೆ ಮನವಿ
ಕುಲಪತಿ, ಕುಲಸಚಿವರ ಸಹಿ ನಕಲು ಮಾಡಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ ರಸೀದಿ ಕೇಳಿದಾಗ ರಸೀದಿ ಇರಲ್ಲ ಎಂದು ಸಬೂಬು ಹೇಳಿದ್ದಾರೆ. ಈ ವಿಚಾರ ವಿವಿ ಗಮನಕ್ಕೆ ಬರುತ್ತಿದ್ದಂತೆ ಸದ್ದಿಲ್ಲದೇ ತನಿಖಾ ಸಮಿತಿ ರಚನೆ ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ತನಿಖಾ ತಂಡ ರಚನೆ ಮಾಡಲಾಗಿದೆ. ಇಲ್ಲಿವರೆಗೂ ಯಾರನ್ನೂ ಅಮಾನತು ಮಾಡದೇ ತನಿಖೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಕೇರಳ| ಲವ್ವರ್, ಕುಟುಂಬದ ಐವರನ್ನು ಹತ್ಯೆ ಮಾಡಿದ ವ್ಯಕ್ತಿ – ತಾಯಿ ಸ್ಥಿತಿ ಗಂಭೀರ