ಗುವಾಹಟಿ: ಬ್ರಹ್ಮಪುತ್ರ ನದಿ ದಂಡೆ ಮೇಲಿರುವ 330 ಎಕರೆ ಭೂಮಿಯಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದ ತೆರವು ಕಾರ್ಯಾಚರಣೆಯು ಒಂದು ಹಂತದಲ್ಲಿ ಮುಗಿದೆ.
ಅಸ್ಸಾಂನ ಸೋನಿತ್‍ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿರುವ ಬರ್ಚಲ್ಲಾದ 3ನೇ ಚಿಟಲ್ಮರಿ ಪ್ರದೇಶದಲ್ಲಿ ಇರುವ ಮನೆಗಳನ್ನು ಕೆಡವಲು 50 ಜೆಸಿಬಿ, ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು, ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ.
Advertisement
Advertisement
ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಅಕ್ರಮ ನಿವಾಸಿಗಳಿಗೆ ತೆರವು ನೋಟಿಸ್‍ನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿರುವ ಜನರೆಲ್ಲರೂ ಆ ಪ್ರದೇಶವನ್ನು ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಮುಕ್ತವಾಗಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
Advertisement
ಮುಂಜಾನೆ 5 ಗಂಟೆಯ ಸುಮಾರಿಗೆ ಈ ತೆರವು ಕಾರ್ಯಾಚರಣೆ ಪ್ರಾರಂಭವಾಗಿತ್ತು. ತೆರವುಗೊಳಿಸಬೇಕಾದ ಪ್ರದೇಶವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಒಂದು ಭಾಗವು ಬೆಳಗ್ಗೆ 9 ಗಂಟೆಗೆ ಮುಗಿದಿದೆ ಎಂದರು.
Advertisement
ಮುನ್ನೆಚ್ಚರಿಕೆ ಕ್ರಮವಾಗಿ ಅಸ್ಸಾಂ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಸೇರಿದಂತೆ ಸುಮಾರು 1,200 ಭದ್ರತಾ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಸರ್ಕಾರಿ ದಾಖಲೆಗಳ ಪ್ರಕಾರ, 299 ಕುಟುಂಬಗಳು ಈ ಪ್ರದೇಶದಲ್ಲಿ ವಾಸಿಸುತ್ತಿದ್ದವು. ಆದರೆ ಅವರಲ್ಲಿ ಶೇಕಡಾ 90 ಕ್ಕೂ ಹೆಚ್ಚು ಕುಟುಂಬಗಳು ಸುಮಾರು 8 ತಿಂಗಳ ಹಿಂದೆ ನೋಟಿಸ್ ಸ್ವೀಕರಿಸಿದ್ದು, ಆಗಲೇ ಈ ಪ್ರದೇಶದಿಂದ ತೊರೆದಿದ್ದಾರೆ. ಇದನ್ನೂ ಓದಿ: ಪ್ರಶ್ನೆಗೆ ಉತ್ತರಿಸಲು ತಡಪಡಿಸಿದ ಜಿಲ್ಲಾಧಿಕಾರಿಗೆ ಸೀತಾರಾಮನ್ ಕ್ಲಾಸ್ – ಕೆಟಿಆರ್ ಆಘಾತ
ಈ ಬಗ್ಗೆ ಅಲ್ಲಿನ ಕೆಲವು ನಿವಾಸಿಗಳು ಮಾತನಾಡಿ, ನಾವು ದಶಕಗಳಿಂದ ಇಲ್ಲೇ ವಾಸಿಸುತ್ತಿದ್ದೆವು. ನಾವು ಹೊಲಗಳಲ್ಲಿ ಕೆಲಸ ಮಾಡುತ್ತಿದ್ದೆವು ಇದರಿಂದಾಗಿ ನಮಗೆ ಬೇರೆ ಯಾವ ಉದ್ಯೋಗವು ಇಲ್ಲ. ಸರ್ಕಾರದಿಂದ ಯಾವುದೇ ಪುನರ್ವಸತಿ ಕಲ್ಪಿಸಿಲ್ಲ ಅಳಲು ತೋಡಿಕೊಂಡರು. ಇದನ್ನೂ ಓದಿ: ಕೇಳುವಷ್ಟು ಶಾಂತಿ, ಸಹನೆ ಇಲ್ಲವೆಂದ್ರೆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ: ಡಿಕೆಶಿ