ಅಮರಾವತಿ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ.
ಈ ವಿಡಿಯೋ ಕೂಡ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆಯಿಂದ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.
ಘಟನಾ ಸ್ಥಳದಿಂದ ಬಂದ ದೃಶ್ಯಗಳಲ್ಲಿ ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆಗಳು ಚಿಮ್ಮುತ್ತಿರುವುದು ಕಂಡುಬಂದಿದೆ. ಅಗ್ನಿ ಅವಘಡದ ಪರಿಣಾಮವಾಗಿ ಇಡೀ ಪ್ರದೇಶದಾದ್ಯಂತ ದಟ್ಟ ಹೊಗೆ ಆವರಿಸಿವೆ. ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ತೀವ್ರವಾಗಿ ಹಬ್ಬುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣವೇನು? ಘಟನೆಯಲ್ಲಿ ಯಾರಿಗಾದರೂ ಗಾಯಗಳಾಗಿವೆಯೇ? ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
