ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ನಲ್ಲಿರುವ (Kabul) ಚೀನೀಯರ ವಸತಿ ಗೃಹದ (China Guest House) ಬಳಿ ಭಾರೀ ಸ್ಫೋಟ (Blast) ಹಾಗೂ ಗುಂಡಿನ ದಾಳಿ (Firing) ನಡೆದಿರುವುದಾಗಿ ವರದಿಯಾಗಿದೆ.
ಕಾಬೂಲ್‌ನ ಶಹರ್-ಇ ನಾವ್ ಪ್ರದೇಶದಲ್ಲಿ ಚೀನಾದ ಅತಿಥಿ ಗೃಹದ ಬಳಿ ಭಾರೀ ಸ್ಫೋಟ ಹಾಗೂ ಗುಂಡಿನ ದಾಳಿ ನಡೆದಿರುವುದಾಗಿ ನಿವಾಸಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ. ಆದರೆ ಭದ್ರತಾ ಅಧಿಕಾರಿಗಳು ಈ ಘಟನೆಯ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
په کابل کې یو چینایي هوټل ته وسلوال ننوتلي دي .
سیمه کې سرچینې وايي تروسه هم جګړه روانه ده . pic.twitter.com/3WQC1TAQQ3
— Abdulhaq Omeri (@AbdulhaqOmeri) December 12, 2022
ವರದಿಗಳ ಪ್ರಕಾರ ತಾಲಿಬಾನ್ ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಚೀನಾದ ವ್ಯಾಪಾರಸ್ಥರು ಕಾಬೂಲ್‌ನ ಜನಪ್ರಿಯ ಲಾಂಹನ್ ಹೋಟೆಲ್‌ಗೆ ತೆರಳುತ್ತಾರೆ. ಇಂದು ಹೋಟೆಲ್‌ಗೆ ಹಲವು ದಾಳಿಕೋರರು ನುಗ್ಗಿದ್ದು, ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 3 ತಿಂಗಳು ಕಾಲೇಜಲ್ಲಿ ವಿದ್ಯಾರ್ಥಿನಿಯಂತೆ ನಟಿಸಿ ರ‍್ಯಾಗಿಂಗ್ ಪ್ರಕರಣವನ್ನು ಭೇದಿಸಿದ ಮಹಿಳಾ ಪೇದೆ
ಒಂದು ದಿನದ ಹಿಂದೆಯಷ್ಟೇ ಅಫ್ಘಾನಿಸ್ತಾನದ ಸ್ಪಿನ್ ಬೋಲ್ಡಾಕ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರದೇಶ ಅಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪಾಂತ್ಯದಲ್ಲಿರುವ ಪಾಕಿಸ್ತಾನದ ಗಡಿ ಪ್ರದೇಶವಾಗಿದೆ.
ಕಳೆದ ವರ್ಷ ಆಗಸ್ಟ್‌ನಲ್ಲಿ ಅಧಿಕಾರಕ್ಕೆ ಬಂದ ನಂತರ ತಾಲಿಬಾನ್ ರಾಷ್ಟ್ರೀಯ ಭದ್ರತೆಯನ್ನು ಸುಧಾರಿಸಿದ್ದೇವೆ ಎಂದು ಹೇಳಿಕೊಂಡಿದೆ. ಆದರೆ ಅಫ್ಘಾನಿಸ್ತಾನ ತಾಲಿಬಾನ್ ವಶವಾದ ಬಳಿಕ ಹಲವಾರು ಬಾಂಬ್ ಸ್ಫೋಟಗಳು ಮತ್ತು ದಾಳಿಗಳು ನಡೆದಿರುವುದು ವರದಿಯಾಗಿವೆ. ಇದನ್ನೂ ಓದಿ: ನರ್ಸಿಂಗ್ ಕಾಲೇಜಿನಲ್ಲಿ ಮಾಸ್ ಕಾಪಿ – 10 ಸಾವಿರ ವಸೂಲಿ ಮಾಡಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ