ಲಕ್ನೋ: ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಾಸ್ಟೆಲ್ ಒಳಗೆ ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರು ಜೀವ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೋಯ್ಡಾದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ- ಏಣಿಯಿಂದ ಇಳಿದು ಪಾರಾದ ವಿದ್ಯಾರ್ಥಿನಿಯರು#GreaterNoida #Hostel #Fire pic.twitter.com/ufmHQ3q5X8
— PublicTV (@publictvnews) March 28, 2025
ಗ್ರೇಟರ್ ನೋಯ್ಡಾದ (Greater Noida) ನಾಲೆಡ್ಜ್ ಪಾರ್ಕ್- 3ರಲ್ಲಿರುವ ಅನ್ನಪೂರ್ಣ ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಎಸಿ ಸ್ಫೋಟಗೊಂಡ ಪರಿಣಾಮ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಮೊದಲು ನನಗೆ ತಲೆ ಸುತ್ತುತ್ತಿದೆ ಎಂದು ಭಾವಿಸಿದ್ದೆ – ಥೈಲ್ಯಾಂಡ್ ಭೂಕಂಪದ ಭಯಾನಕ ಚಿತ್ರಣ ಬಿಚ್ಚಿಟ್ಟ ಕನ್ನಡಿಗ
ಹಾಸ್ಟೆಲ್‌ನ ಎರಡನೇ ಮಹಡಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರನ್ನು ಸ್ಥಳೀಯರು ಏಣಿಯ ಸಹಾಯದಿಂದ ರಕ್ಷಿಸಿದರು. ಆದರೆ, ಒಬ್ಬ ಹುಡುಗಿ ಏಣಿಗೆ ಕಾಲಿಡಲು ಪ್ರಯತ್ನಿಸುತ್ತಿದ್ದಾಗ ಕೆಳಕ್ಕೆ ಬಿದ್ದಳು. ಬಿದ್ದ ವಿದ್ಯಾರ್ಥಿನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಕತ್ತಿಯಿಂದ ಹೊಡೆದು ನಾಲ್ವರ ಭೀಕರ ಹತ್ಯೆ
ಗುರುವಾರ ಸಂಜೆ 5 ಗಂಟೆ ಸುಮಾರಿಗೆ, ನಾಲೆಡ್ಜ್ ಪಾರ್ಕ್ -3 ರಲ್ಲಿರುವ ಅನ್ನಪೂರ್ಣ ಗರ್ಲ್ಸ್ ಹಾಸ್ಟೆಲ್‌ನಲ್ಲಿ (Girl’s Hostel) ಬೆಂಕಿ ಕಾಣಿಸಿಕೊಂಡಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ನಮ್ಮ ತಂಡ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಿಸಿತು ಎಂದು ಅಗ್ನಿಶಾಮಕ ಅಧಿಕಾರಿ ಪ್ರದೀಪ್ ಕುಮಾರ್ ಚೌಬೆ ಮಾಹಿತಿ ನೀಡಿದರು. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪ – 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ, ಗಗನಚುಂಬಿ ಕಟ್ಟಡಗಳು ನೆಲಸಮ!