ತಿರುವನಂತಪುರಂ: ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಸಂಸ್ಥೆಯೊಂದರಲ್ಲಿ ಬುಧವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಕಿನ್‌ಫ್ರಾ ಪಾರ್ಕ್ನಲ್ಲಿರುವ ಖಾಸಗಿ ಸಂಸ್ಥೆ(ಗ್ರೀನ್ ಲೀಫ್ ಎಕ್ಸ್ಟೆನ್ಶನ್ಸ್)ಯಲ್ಲಿ ಮುಂಜಾನೆ ವಾಕಿಂಗ್‌ಗೆ ತೆರಳಿದ್ದ ಕೆಲವು ಸ್ಥಳೀಯರು ಬೆಂಕಿ ಹೊತ್ತಿ ಉರಿಯುವುದನ್ನು ಗುರುತಿಸಿದ್ದಾರೆ. ತಕ್ಷಣ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ 3 ಅಗ್ನಿಶಾಮಕ ಟೆಂಡರ್‌ಗಳು ಬೆಂಕಿ ನಂದಿಸಿದ್ದಾರೆ.
ಕಂಪನಿಯ ಆವರಣದೊಳಗಿನ ಗ್ಯಾಸ್ ಪೈಪ್‌ಲೈನ್ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯಿಂದ ಕೆಲವರಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ
ಬೆಂಕಿಯ ಹೊಗೆಯಿಂದಾಗಿ ಜನರ ಆರೋಗ್ಯದಲ್ಲಿ ಏರುಪೇರು ಆಗಬಹುದು ಎಂಬ ಕಾರಣಕ್ಕೆ ಎರ್ನಾಕುಲಂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಅಧಿಕಾರಿಗಳು, ಸ್ಥಳೀಯರು ಹಾಗೂ ಕಂಪನಿ ಸಿಬ್ಬಂದಿ ಸೇರಿ ಸುಮಾರು 51 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ್ದಕ್ಕಾಗಿ ಭಯಭೀತಗೊಳಿಸುವುದು ದಬ್ಬಾಳಿಕೆ, ಮುಸಲ್ಮಾನರ ಶೋಷಣೆಯಾಗಿದೆ: ಪಾಕ್ ಸಚಿವ