New Delhi| ರಜೌರಿ ಗಾರ್ಡನ್ ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ

Public TV
1 Min Read
Rajouri Garden Jungle Jamboree Restaurant Fire

– 10 ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ

ನವದೆಹಲಿ: ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ (Rajouri Garden) ಪ್ರದೇಶದ ಜಂಗಲ್ ಜಾಂಬೋರಿ ರೆಸ್ಟೋರೆಂಟ್‌ನಲ್ಲಿ (Jungle Jamboree Restaurant) ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ 10 ಅಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸೋಮವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ರಾಜೌರಿ ಗಾರ್ಡನ್ ಮೆಟ್ರೋ ನಿಲ್ದಾಣದ ಬಳಿ ಬೆಂಕಿ ಅವಘಡ ಸಂಭವಿಸಿರುವುದಾಗಿ ನಮಗೆ ಕರೆ ಬಂದಿದೆ. ಬೆಂಕಿಯನ್ನು ನಿಯಂತ್ರಿಸಲು 10 ಅಗ್ನಿಶಾಮಕ ಟೆಂಡರ್‌ಗಳನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗಾರ್ಗ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರೂ ಪಾಲಿಸಲು ಬದ್ಧ – ರಾಜ್ಯಧ್ಯಕ್ಷ ಹುದ್ದೆ ಬಗ್ಗೆ ನಿಖಿಲ್ ಮಾತು

ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ. ಘಟನೆಯಿಂದ ಅಕ್ಕಪಕ್ಕದ ಅಂಗಡಿಯವರಲ್ಲಿ ಆತಂಕ ಮನೆಮಾಡಿದೆ. ಘಟನೆ ನಡೆದ ವೇಳೆ ರೆಸ್ಟೋರೆಂಟ್‌ನಲ್ಲಿ ಸುಮಾರು 20 ಮಂದಿ ಇದ್ದರು. ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಲ್ಲರೂ ಹೋಟೆಲ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ‌ಕ್ರಮ: ಈಶ್ವರ್ ಖಂಡ್ರೆ

Share This Article