LatestMain PostNational

ದೆಹಲಿಯ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ – 1 ಸಾವು, ಹಲವರಿಗೆ ಗಾಯ

ನವದೆಹಲಿ: ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಗುರುವಾರ ಮಧ್ಯಾಹ್ನ ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ಧಾವಿಸಿವೆ ಎಂದು ಅಗ್ನಿಶಾಮಕ ಸೇವಾ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ. ಇದನ್ನೂ ಓದಿ: ಬಾಕ್ಸಿಂಗ್ ರಿಂಗ್‍ನಲ್ಲಿಯೇ ಹೃದಯಾಘಾತ – ಚಾಂಪಿಯನ್ ಮೂಸಾ ಯಮಕ್ ವಿಧಿವಶ

ಬೆಂಕಿ ಹೊತ್ತಿಕೊಳ್ಳು ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ 7 ಮಂದಿಗೆ ಗಾಯಗಳಾಗಿದ್ದು, ಅವರನ್ನು ನಗರದ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ 7 ಜನರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ. ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ – ಅರ್ಜಿ ವಿಚಾರಣೆಗೆ ಗ್ರೀನ್‌ ಸಿಗ್ನಲ್‌

ಕೆಲವೇ ದಿನಗಳ ಹಿಂದೆ ದೆಹಲಿಯ ಮುಂಡ್ಕಾದಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಆ ಘಟನೆಯಲ್ಲಿ 27 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದರು.

Leave a Reply

Your email address will not be published.

Back to top button