ಕೋಲ್ಕತ್ತಾ: ಥರ್ಮಾಕೋಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದಿದೆ.
ಈ ಬಗ್ಗೆ ಕಾರ್ಖಾನೆಯ ಕಾರ್ಮಿಕ ಪಂಚನ್ ಮಲ್ಲಿಕ್ ಮಾತನಾಡಿ, ಬೆಂಕಿ ಹೊತ್ತಿಕೊಂಡಾಗ ಕಾರ್ಮಿಕರು ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದರು. ಒಟ್ಟಾರೆಯಾಗಿ ಕಾರ್ಖಾನೆಯೊಳಗೆ 200-250 ಮಂದಿ ಕೆಲಸ ಮಾಡುತ್ತಿದ್ದಾರೆ. ಆರಂಭದಲ್ಲಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ ಮೂರು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
Advertisement
Advertisement
ಕಂಪನಿ ಮೇಲ್ವಿಚಾರಕಿ ಸುನೇತ್ರಾ ಚಟ್ಟೋಪಾಧ್ಯಾಯ ಮಾತನಾಡಿ, ಬೆಂಕಿಯಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ. ಕಾರ್ಖಾನೆಯೊಳಗೆ ಬೆಂಕಿ ನಂದಿಸುವ ವ್ಯವಸ್ಥೆ ಇದ್ದರೂ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ನಂದಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಮಾರು ಒಂದು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವೈದ್ಯನ ಎಡವಟ್ಟು – ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ರೋಗಿ ಸಾವು
Advertisement
Advertisement
ಈ ಕಾರ್ಖಾನೆಯು ಹೌರಾದ ದೊಮ್ಜೂರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಾಪುರ ಪ್ರದೇಶದಲ್ಲಿದೆ. ಬೆಂಕಿಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಖಾನೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಅಧಿಕಾರಿಗಳು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎನ್ನುವುದರ ಕುರಿತು ತನಿಖೆ ಆರಂಭವಾಗಿದೆ. ಇದನ್ನೂ ಓದಿ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆಯ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ