ಮೆಗಾಸ್ಟಾರ್ ಚಿರಂಜೀವಿ- ರಾಮ್ ಚರಣ್ (Ramcharan) ನಟನೆಯ `ಆಚಾರ್ಯ’ (Acharya Film) ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಲೆಕ್ಷನ್ ಮಾಡೋದರಲ್ಲಿ ಸೋತಿತ್ತು. ಆದರೆ ಸಿನಿಮಾಗಾಗಿ 20 ಕೋಟಿ ವೆಚ್ಚದ ಸೆಟ್‌ನ್ನ ನಿರ್ಮಾಣ ಮಾಡಲಾಗಿತ್ತು. ಇದೀಗ ಈ ಸೆಟ್ ಬೆಂಕಿಗಾಹುತಿ ಆಗಿದೆ.
ಕೊರಟಾಲ ಶಿವ ನಿರ್ದೇಶನದ `ಆಚಾರ್ಯ’ ಚಿತ್ರದಲ್ಲಿ ಚಿರಂಜೀವಿ- ರಾಮ್ ಚರಣ್ ಲೀಡ್ ರೋಲ್‌ನಲ್ಲಿ ನಟಿಸಿದ್ದರು. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದರು. ಚಿರಂಜೀವಿ (Megastar Chiranjeevi) ಅವರ ಖಾಸಗಿ ಜಾಗದಲ್ಲಿ 20 ಕೋಟಿ ರೂಪಾಯಿ ವೆಚ್ಚದ ದೇವಸ್ಥಾನದ ಪಟ್ಟಣದ (Temple Set) ಅದ್ದೂರಿ ಸೆಟ್ ಕೂಡ ನಿರ್ಮಾಣ ಮಾಡಲಾಗಿತ್ತು. 20 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತು. ಇದೀಗ ಈ ಸೆಟ್‌ಗೆ ಬೆಂಕಿ (Fire) ಬಿದ್ದಿದೆ.
ಮುಂದೆ ತಮ್ಮ ಸಿನಿಮಾ ನಂತರ ಬೇರೆ ಚಿತ್ರದ ಶೂಟಿಂಗ್‌ಗೂ ಕೊಡಬಹುದು ಎಂಬ ಕಾರಣಕ್ಕೆ ಈ ಸೆಟ್‌ನ್ನ ಹಾಗೆಯೇ ಇರಿಸಲಾಗಿತ್ತು. ಇನ್ನೂ ಸೋಮವಾರ (ಫೆ.27)ರಂದು ಸಂಜೆ ಕೆಲವರು ಈ ಜಾಗದಲ್ಲಿ ಸಿಗರೇಟ್ ಸೇದಿದ್ದಾರೆ. ಅವರು ಎದ್ದು ಹೋದ ಮೇಲೆ ಸೆಟ್‌ಗೆ ಬೆಂಕಿ ತಗುಲಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಿದ್ದರು ಕೂಡ ಅವರು ಬರುವ ವೇಳೆಗೆ ಇಡೀ ಸೆಟ್ ಬೆಂಕಿಗಾಹುತಿ ಆಗಿದೆ. ಇದನ್ನೂ ಓದಿ: ಪೂಜಾ ಗಾಂಧಿ ಕನ್ನಡ ಪ್ರೀತಿಗೆ ಭೇಷ್ ಎಂದ ಕನ್ನಡಿಗರು
ಇನ್ನೂ ಈ ಬೆಂಕಿ ದುರಂತದ ವೇಳೆ ಯಾರು ಸ್ಥಳದಲ್ಲಿ ಇಲ್ಲದ ಕಾರಣ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 100 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಿದ್ದ ಈ ಚಿತ್ರದ ಸೋಲಿನಿಂದ ಚಿರಂಜೀವಿ ತತ್ತರಿಸಿದ್ದರು. ಈಗ ಸಿನಿಮಾ ಸೆಟ್‌ಗೆ ಅಗ್ನಿ ಅವಘಡ ಸಂಭವಿಸಿರೋದು ಅಭಿಮಾನಿಗಳಲ್ಲಿ ಬೇಸರ ಮೂಡಿದೆ.