ಬೆಂಗಳೂರು: ಥಣಿಸಂದ್ರದ (Thanisandra) ಗ್ಯಾರೇಜ್ (Garage) ಒಂದರಲ್ಲಿ ಅಗ್ನಿಅವಘಡ (Fire Accident) ಸಂಭವಿಸಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಹಾಗೂ 8 ಆಟೋಗಳು ಸುಟ್ಟು ಕರಕಲಾಗಿವೆ.
ಥಣಿಸಂದ್ರ ಮುಖ್ಯರಸ್ತೆಯ ಭಾರತಿಯ ಸಿಟಿ ಬಳಿ ಇರುವ ಗ್ಯಾರೇಜ್‌ನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಸಣ್ಣಪುಟ್ಟ ರಿಪೇರಿಗೆ ತಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಜಾಗ್ವಾರ್, ರೇಂಜ್ ರೋವರ್ ಕಾರುಗಳಿಗೂ ಹಾನಿಯಾಗಿದೆ. ಇದನ್ನೂ ಓದಿ: ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಗ್ಯಾರೇಜ್‌ನಿಂದ ಪಕ್ಕದ ಶೆಡ್‌ಗೂ ಬೆಂಕಿ ತಗುಲಿದ್ದು, ಅಲ್ಲಿ ನಿಲ್ಲಿಸಿದ್ದ ಸುಮಾರು 8 ಆಟೋಗಳು ಅಗ್ನಿಗೆ ಆಹುತಿಯಾಗಿವೆ. ಅಲ್ಲದೇ ಕಾರು ಗ್ಯಾರೇಜ್ ಸಮೀಪದ ಯುಪಿವಿಸಿ ಕಿಟಕಿ ಫ್ಯಾಕ್ಟರಿಗೂ ಬೆಂಕಿ ತಗುಲಿದೆ. ಇದರಿಂದ ಫ್ಯಾಕ್ಟರಿಯಲ್ಲಿದ್ದ 2 ಲಕ್ಷ ರೂ. ಮೌಲ್ಯದ ಗ್ರಾಹಕರ ಕಿಟಕಿ ವಸ್ತುಗಳು, ಹಾಗೂ 4 ಲಕ್ಷ ರೂ. ಮೌಲ್ಯದ ಫ್ಯಾಕ್ಟರಿ ಯಂತ್ರಕ್ಕೆ ಹಾನಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: RTO ಅಧಿಕಾರಿಗಳ ವಿಶೇಷ ಕಾರ್ಯಾಚರಣೆ – 390 ಖಾಸಗಿ ಶಾಲಾ ವಾಹನಗಳು ಸೀಜ್
