ಬೆಂಗಳೂರು: ಇಲ್ಲಿನ ಕಾಡುಗೋಡಿ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ದುರಂತ (Fire Accident )ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ.
ವೈಟ್ ಫೀಲ್ಡ್ ಮುಖ್ಯರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿರುವ ಕಾಡುಗೋಡಿ (Kadugodi) ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು ನೂರಾರು ಎಕರೆ ವ್ಯಾಪ್ತಿಯಲ್ಲಿರೋ ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ಸಿಎಂ ಕಾರನ್ನೇ ತಡೆದು ಪರಿಶೀಲಿಸಿದ ಪೊಲೀಸರು
ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿದೆ. ಎರಡು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿ¸ಸುವ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ