ಕೌಲಾಲಂಪುರ: ಮಲೇಷ್ಯಾದ (Malaysia) ರಾಜಧಾನಿ ಕೌಲಾಲಂಪುರದ ಬಳಿಯ ಪುತ್ರ ಹೈಟ್ಸ್‌ನಲ್ಲಿ ಮಂಗಳವಾರ ಗ್ಯಾಸ್ ಪೈಪ್‌ಲೈನ್ ಸ್ಫೋಟಿಸಿ (Gas) ಭೀಕರ ಅಗ್ನಿ ಅವಘಡ (Fire Accident ) ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಅಣಬೆ ಆಕಾರದಲ್ಲಿ ಆಕಾಶದೆತ್ತರಕ್ಕೆ ಚಿಮ್ಮಿದೆ.
ಪುತ್ರ ಹೈಟ್ಸ್‌ನಲ್ಲಿರುವ ಗ್ಯಾಸ್ ಸ್ಟೇಷನ್ ಬಳಿ ಆಕಾಶದೆತ್ತರಕ್ಕೆ ಹೊತ್ತಿ ಉರಿಯುತ್ತಿರುವ ಬೆಂಕಿಯ ಜ್ವಾಲೆ ಸುಮಾರು ಕಿಲೋಮೀಟರ್ ದೂರದವರೆಗೂ ಕಾಣಿಸುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ನೀರಿನ ಟ್ಯಾಂಕರ್‌ಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 12 ಜನ ಗಾಯಗೊಂಡಿದ್ದಾರೆ ಮತ್ತು ಇತರ 82 ಜನರನ್ನು ಅವಘಡ ನಡೆದ ಸ್ಥಳದಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ | ಗೂಡ್ಸ್ ರೈಲುಗಳ ನಡುವೆ ಡಿಕ್ಕಿ – ಇಬ್ಬರು ಲೋಕೋ ಪೈಲಟ್ ಸೇರಿ 3 ಸಾವು
A massive fire has broken out at a petrol station in Putra Heights in Malaysia. No information on casualties 🔥👀pic.twitter.com/wSz3ta0gxx
— Volcaholic 🌋 (@volcaholic1) April 1, 2025
ಬೆಳಿಗ್ಗೆ 8:10 ರ ಸುಮಾರಿಗೆ ಅಗ್ನಿ ಅವಘಡದ ಮಾಹಿತಿ ಬಂದಿದೆ. ಪೆಟ್ರೋನಾಸ್ ಅನಿಲ ಪೈಪ್‌ಲೈನ್ ಸೋರಿಕೆಯಾಗಿದ್ದು, ಪೈಪ್‌ಲೈನ್‌ನ 500 ಮೀಟರ್ ಬೆಂಕಿಗೆ ಆಹುತಿಯಾಗಿದೆ. ಹಲವಾರು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದೆ ಮತ್ತು ಕೆಲವು ವ್ಯಕ್ತಿಗಳು ಸಿಲುಕಿಕೊಂಡಿದ್ದಾರೆ. ಸಿಲುಕಿರುವ ವ್ಯಕ್ತಿಗಳ ಹಾಗೂ ಸ್ಥಳಾಂತರಿಸಲ್ಪಟ್ಟ ಜನರ ಸಂಖ್ಯೆ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನರನ್ನು ಪುತ್ರ ಹೈಟ್ಸ್ ಮಸೀದಿ ಸಭಾಂಗಣದ ತಾತ್ಕಾಲಿಕ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಿ, ವೈದ್ಯಕೀಯ ನೆರವು ನೀಡಲಾಗಿದೆ. ಸಂಬಂಧಪಟ್ಟ ಅನಿಲ ಪೈಪ್‌ಲೈನ್ ಸ್ಥಗಿತಗೊಳಿಸಲಾಗಿದೆ. ಹೆಚ್ಚಿನ ಸ್ಫೋಟಗಳನ್ನು ತಪ್ಪಿಸಲು ಉಳಿದ ಇಂಧನವನ್ನು ಖಾಲಿ ಮಾಡಲು ರಕ್ಷಣಾ ಸಿಬ್ಬಂದಿ ಕ್ರಮಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಗ್ನಿ ಅವಘಡದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಆಕಾಶಕ್ಕೆ ಬೆಂಕಿ ಚಿಮ್ಮಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ – ಮೂವರು ಮಕ್ಕಳು ಸೇರಿ 6 ಮಂದಿ ಸಜೀವ ದಹನ