ಲಕ್ನೋ: ಇತ್ತೀಚೆಗೆ ಹೊಸದಾಗಿ ನಿರ್ಮಿಸಲಾಗಿದ್ದ ಉತ್ತರ ಪ್ರದೇಶದ (Uttar Pradesh) ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ (Purvanchal Expressway) ಒಂದು ಭಾಗ ಕುಸಿದು ಕಾರು (Car) ಗುಂಡಿಗೆ (Pothole) ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯನ್ನು ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮೊದಲು 2021ರ ನವೆಂಬರ್ ತಿಂಗಳಿನಲ್ಲಿ ಉದ್ಘಾಟಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ಎಕ್ಸ್‌ಪ್ರೆಸ್‌ವೇವೇ ಯನ್ನು ಉದ್ಘಾಸಿದ್ದರು.
Advertisement
Advertisement
ಇದೀಗ ಭಾರೀ ಮಳೆಯ ಹಿನ್ನೆಲೆ ಎಕ್ಸ್‌ಪ್ರೆಸ್‌ವೇಯ ಒಂದು ಭಾಗದಲ್ಲಿ ಕುಸಿತ ಉಂಟಾಗಿದೆ. ಈ ವೇಳೆ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಕಾರು ಗುಂಡಿಗೆ ಬಿದ್ದಿದ್ದು, ಅದರಲ್ಲಿದ್ದ ನಾಲ್ವರಿಗೆ ಗಾಯಗಳಾಗಿದೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್ ಇನ್ನುಮುಂದೆ ಒಡೆಯರ್ ಎಕ್ಸ್‌ಪ್ರೆಸ್ – ಶಿವಮೊಗ್ಗಕ್ಕೆ ಕುವೆಂಪು ಎಕ್ಸ್‌ಪ್ರೆಸ್
Advertisement
Advertisement
ಇದೀಗ ಸಾವಿರಾರು ಕೋಟಿ ರೂ. ಖರ್ಚು ಮಾಡಿ ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ಎಕ್ಸ್‌ಪ್ರೆಸ್‌ವೇಗೆ ಮಳೆಯನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ, ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಕುಸಿದಿದೆ. 15 ಅಡಿಯ ದೊಡ್ಡ ಹೊಂಡಕ್ಕೆ ಕಾರೊಂದು ಬಿದ್ದಿದೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಸ್ವಲ್ಪವೇ ಮೊದಲು ಮೋದಿಯವರು ಇದನ್ನು ಉದ್ಘಾಟಿಸಿದ್ದರು. ಇದೀಗ ಫಲಿತಾಂಶ ಹೊರಬಿದ್ದಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ನಾಗ್ಪುರ- ಮುಂಬೈ ಎಕ್ಸ್‌ಪ್ರೆಸ್‌ವೇ ಶೀಘ್ರವೇ ಸಂಚಾರಕ್ಕೆ ಮುಕ್ತ – ವಾಹನಗಳಿಗೆ 120 kmph ವೇಗದ ಮಿತಿ ನಿಗದಿ