Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ವಿಷ್ಣು ಪುಣ್ಯಭೂಮಿಗಾಗಿ ಬೃಹತ್ ಪ್ರತಿಭಟನೆ: ಅಭಿಮಾನಿಗಳ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾ.ವಿಷ್ಣು ಪುಣ್ಯಭೂಮಿಗಾಗಿ ಬೃಹತ್ ಪ್ರತಿಭಟನೆ: ಅಭಿಮಾನಿಗಳ ಆಕ್ರೋಶ

Cinema

ಡಾ.ವಿಷ್ಣು ಪುಣ್ಯಭೂಮಿಗಾಗಿ ಬೃಹತ್ ಪ್ರತಿಭಟನೆ: ಅಭಿಮಾನಿಗಳ ಆಕ್ರೋಶ

Public TV
Last updated: November 28, 2023 4:09 pm
Public TV
Share
3 Min Read
veerakaputra srinivasa
SHARE

ಕನ್ನಡದ ಹೆಸರಾಂತ ನಟ ಡಾ.ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಮೈಸೂರಿಗೆ ಸ್ಮಾರಕವನ್ನು ಶಿಫ್ಟ್ ಮಾಡಿರುವ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳವನ್ನು ತೆರವು ಮಾಡಲು ನಿರ್ಧರಿಸಲಾಗಿತ್ತು. ಈ ವಿವಾದ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಈಗ ಮತ್ತೆ ಅಭಿಮಾನಿಗಳ ಮತ್ತು ಅಭಿಮಾನ ಸ್ಟುಡಿಯೋ ಮಾಲೀಕರ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುತ್ತಿದೆ. ಈ ಕುರಿತಂತೆ ಅಭಿಮಾನಿಗಳು ಮೊನ್ನೆ ಸಭೆ ಸೇರಿ ಬೃಹತ್ ಪ್ರತಿಭಟನೆ (Protest) ಮಾಡಲು ನಿರ್ಧರಿಸಿದ್ದಾರೆ. ಈ ಕುರಿತಂತೆ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ ಬರೆದ ಪತ್ರ ಇಲ್ಲಿದೆ.

Veerakaputra

ಮೇರು ನಟ ಡಾ.ವಿಷ್ಣುವರ್ಧನ್‌ ಅವರು ಅಗಲಿ 14 ವರ್ಷಗಳಾದವು. ಆದರೆ ಇಂದಿಗೂ ಅವರ ಅಂತ್ಯಸಂಸ್ಕಾರಗೊಂಡ ಜಾಗವನ್ನು ಅಭಿವೃದ್ದಿಪಡಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಿಲ್ಲ. ವಾಸ್ತವದಲ್ಲಿ ಹಿರಿಯ ಕಲಾವಿದ ಬಾಲಕೃಷ್ಣ ಅವರಿಗೆ ಸರ್ಕಾರ ಅನುದಾನವಾಗಿ ನೀಡಿರುವ ಜಾಗವೇ ಅಭಿಮಾನ್‌ ಸ್ಟುಡಿಯೋ.  ಕನ್ನಡಿಗರು ಚಿತ್ರರಂಗದ ಕೆಲಸಗಳಿಗೆ ಮದರಾಸಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಕನಸು ಹೊತ್ತು ಬಾಲಣ್ಣನವರು ಸರ್ಕಾರದ ಬಳಿ ಇಪ್ಪತ್ತು ಎಕರೆ ಜಾಗವನ್ನು 99 ವರುಷಕ್ಕೆ ಅನುದಾನವಾಗಿ ಪಡೆದು ಅಭಿಮಾನ್‌ ಸ್ಟುಡಿಯೋ ನಿರ್ಮಿಸಿದ್ದರು. ಆದರೆ ಅವರ ಅಗಲಿಕೆಯ ನಂತರ 2004 ರಲ್ಲಿ ಅವರ ಮಕ್ಕಳು ಅದರಲ್ಲಿ ಹತ್ತು ಎಕರೆ ಜಾಗವನ್ನು ಮಾರಾಟ ಮಾಡಿ, ಸರ್ಕಾರಿ ಜಮೀನನ್ನು ದುರುಪಯೋಗಪಡಿಸಿಕೊಂಡಿದ್ದರು. ಈ ಕಾರಣದಿಂದ ಹಿಂದಿನ ಜಿಲ್ಲಾಧಿಕಾರಿ ಶಂಕರ್‌ ಅವರು ಅಭಿಮಾನ್‌ ಸ್ಟುಡಿಯೋ ಮುಟ್ಟುಗೋಲಿಗೆ ಆದೇಶಿಸಿದ್ದರು. ಆಗ ಬಾಲಕೃಷ್ಣ ಅವರ ಕುಟುಂಬಸ್ಥರು ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ತಂದಿದ್ದರು.

Veerakaputra 2

ಈ ನಡುವೆ, ಡಾ.ವಿಷ್ಣುವರ್ಧನ್‌ ಅವರ ಸ್ಮಾರಕವು ಮೈಸೂರಿಗೆ ಸ್ಥಳಾಂತರಗೊಂಡಿತು. ಆದರೆ ಅಭಿಮಾನಿಗಳು ಸ್ಮಾರಕ ಎಲ್ಲೇ ಆದರೂ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಹಠವಿಡಿದು, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಅತ್ಯಂತ ಅದ್ದೂರಿಯಾಗಿ ಅಭಿಮಾನ್‌ ಸ್ಟುಡಿಯೋದ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ.

vishnuvardhan 1

ಆದರೆ, ಈಗ ಅಭಿಮಾನ್‌ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜೊತೆಗೆ, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು  ನೀಡುತ್ತಿದ್ದಾರೆ. ಈ ಕುರಿತಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್‌ ತಂಗಡಗಿ ಅವರನ್ನು ಭೇಟಿಮಾಡಿ ಅಹವಾಲನ್ನು ಸಲ್ಲಿಸಲಾಗಿದೆ.  ಒಬ್ಬೇ ನಟನಿಗೆ ಎರಡೆರಡು ಕಡೆ ಸ್ಮಾರಕ, ಪುಣ್ಯಭೂಮಿ ಮಾಡುವುದು ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿಗೆ ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುವುದಾಗಿ ತಿಳಿಸಿರುತ್ತೇವೆ.

Veerakaputra 1

ಆದರೂ ಯಾವುದೇ ಸೂಕ್ತಪ್ರತಿಕ್ರಿಯೆಗಳು ಅವರಿಂದ ಬರದೇ ಇರುವುದರಿಂದ ಇದೇ ಡಿಸೆಂಬರ್‌ 17 ರಂದು ಡಾ.ವಿಷ್ಣುವರ್ಧನ್‌ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್‌ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಿಗ್ಗೆ ಹತ್ತರಿಂದ ಸಂಜೆ ಆರು ಗಂಟೆ ತನಕ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಆದಿಯಾಗಿ ಡಾ.ವಿಷ್ಣುವರ್ಧನ್‌ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಸುಮಾರು ಐವತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ.

ಒಂದು ವೇಳೆ ಈ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ, ದೆಹಲಿಯಲ್ಲಿ ನಾವು ಹೋರಾಟವನ್ನು ಮುಂದುವರಿಸಲಿದ್ದೇವೆ ಜೊತೆಗೆ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಲಿದ್ದೇವೆ ಎಂದು ವಿಷ್ಣು ಸೇನಾ ಸಮಿತಿ ಮಾಧ್ಯಮ ಪ್ರಕಟಣೆ ನೀಡಿದೆ. ಪ್ರತಿಭಟನೆ ಸಲುವಾಗಿ ಸಮಾಲೋಚನೆ ಸಭೆಯನ್ನು ಇದೇ ಭಾನುವಾರ ವೀರಕಪುತ್ರ ಶ್ರೀನಿವಾಸ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆಗೆ ಐನೂರಕ್ಕೂ ಹೆಚ್ಚು ಸೇನಾನಿಗಳು ಹಾಜರಿದ್ದರು.

TAGGED:MemorialprotestVeerakaputra SrinivasVishnuvardhanಪ್ರತಿಭಟನೆವಿಷ್ಣುವರ್ಧನ್ವೀರಕಪುತ್ರ ಶ್ರೀನಿವಾಸ್ಸ್ಮಾರಕ
Share This Article
Facebook Whatsapp Whatsapp Telegram

Cinema news

Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows
Marali Manasagide Teaser Release
ಮರಳಿ ಮನಸಾಗಿದೆ ಚಿತ್ರದ ಟೀಸರ್ ರಿಲೀಸ್
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ

Public TV
By Public TV
56 seconds ago
Prajwal Revanna 2
Court

ಪ್ರಜ್ವಲ್‌ಗೆ ಮತ್ತೆ ಶಾಕ್ – ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
6 minutes ago
Chitradurga Man Dies From Electric Shock
Chitradurga

Chitradurga| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Public TV
By Public TV
12 minutes ago
Bengaluru Drugs Seize 2 Arrest
Bengaluru City

ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ಸಿಸಿಬಿ ಶಾಕ್ – 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

Public TV
By Public TV
27 minutes ago
Newlywed Ramesh dies of heart attack the day after wedding
Districts

ಮದುವೆಯಾದ ಮರುದಿನವೇ ಹೃದಯಾಘಾತ – ನವವಿವಾಹಿತ ಸಾವು

Public TV
By Public TV
46 minutes ago
Renuka Chowdhury 1
Latest

ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʻಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?