ಮಡಿಕೇರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Amendment Act) ವಿರೋಧಿಸಿ ಇಂದು ಮಡಿಕೇರಿ (Madikeri) ನಗರದಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಡಿಕೇರಿ ನಗರದ ಕಾರ್ಯಪ್ಪ ಸರ್ಕಲ್ ಬಳಿಯಿಂದ ಗಾಂಧಿಮೈದಾನದವರೆಗೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೋರ ಹಾಕಿದರು. ಇನ್ನೂ ಇದೇ ಸಂದರ್ಭದಲ್ಲಿ ಮಾತಾನಾಡಿದ ಸಮಿತಿಯ ಉಪಾಧ್ಯಕ್ಷ ಕೆ.ಎ.ಯಾಕೂಬ್, ಮುಸ್ಲಿಮರ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಒಗ್ಗಟ್ಟಿನ ಹೋರಾಟ ನಡೆಸುವುದಕ್ಕಾಗಿ ಇಬ್ಬರು ಖಾಝಿಗಳ ನೇತೃತ್ವದಲ್ಲಿ ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ. ನಮಗೆ ಕೇಂದ್ರ ಸರ್ಕಾರದಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ತೊಂದರೆ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುರ್ಷಿದಾಬಾದ್ ಹಿಂಸಾಚಾರ| ಬಿಜೆಪಿ, ಬಿಎಸ್‌ಎಫ್ ಕೈವಾಡವಿದೆ: ಮಮತಾ ಬ್ಯಾನರ್ಜಿ
ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮಾತಾನಾಡಿ, ಬಿಜೆಪಿ ಅವರು ಅಧಿಕಾರದ ದಾಹಕ್ಕಾಗಿ ವಕ್ಫ್ ಬಿಲ್ ಕಾಯ್ದೆ ತಂದಿದ್ದಾರೆ. ವಕ್ಫ್ ಪ್ರಾಪರ್ಟಿಗಳು ಸಂಪೂರ್ಣವಾಗಿ ಸರ್ಕಾರದ ಸುಭದ್ರೆತೆಗೆ ಬರಬೇಕು ಎಂದು ಮಾಡಿದ್ದಾರೆ. ಇಡೀ ದೇಶದಲ್ಲಿ 37 ಲಕ್ಷ ಎಕ್ರೆ ಜಾಗ ವಕ್ಫ್ ಜಾಗ ವಕ್ಫ್ ಆಸ್ತಿಗೆ ಸೇರಿದೆ. ಅದನ್ನು ಕಂಟ್ರೋಲ್ ಮಾಡಲು ಮುಂದಾಗಿದೆ. ಬಿಜೆಪಿಯವರು ಈ ಕಾಯ್ದೆ ತಂದಿರುವುದೇ ಒಡೆದು ಅಳುವ ನೀತಿಯನ್ನು ಸಾರುವುದಕ್ಕೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕ್ಯಾಬಿನೆಟ್ ಸಭೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಆಗೋ ಸಮಸ್ಯೆ ಬಗ್ಗೆ ಚರ್ಚೆ: ಎಂ.ಬಿ ಪಾಟೀಲ್