ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ.
ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಅವಘಡ (Road Accident) ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗ್ತಿದ್ದ ಕಾರು ಬ್ಯಾರಿಕೇಡ್ ಗಮನಿಸದೇ ಸಡನ್ ಆಗಿ ಬ್ರೇಕ್ ಹಾಕಿದೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮುಂಬದಿ ಕಾರಿನ ಕೆಳಗೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೆ ಅನಿವಾರ್ಯ – ಕಂಪ್ಲಿ ಶಾಸಕ ಗಣೇಶ್
Advertisement
Advertisement
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೋಲಿಸರು ಭೇಟಿ ನೀಡಿ ಕಾರುಗಳನ್ನ ತೆರವು ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ ಸಿಜೆಐ ಯಾಕೆ ಭಾಗಿಯಾಗಬೇಕು – ಉಪ ರಾಷ್ಟ್ರಪತಿ ಪ್ರಶ್ನೆ