ಬೆಂಗಳೂರು: ರಥ ಸಪ್ತಮಿ ಪ್ರಯುಕ್ತ ಇಂದು 108 ಸೂರ್ಯ ನಮಸ್ಕಾರ ಮತ್ತು ಸಾಮೂಹಿಕ ಸಪ್ತ ನಮಸ್ಕಾರ ಕಾರ್ಯಕ್ರಮ ನಡೆದಿದೆ.
ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ನಗರದ ಬಸವನಗುಡಿ ಮೈದಾನದಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯುತ್ತಿದೆ. ಬೆಳಗಿನ ಜಾವ 5.30ರಿಂದಲೇ ಸಾಮೂಹಿಕ ಸಪ್ತ ನಮಸ್ಕಾರ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಉಪಸ್ಥಿತರಿದ್ರು. ಸಾಮೂಹಿಕ ಸಪ್ತ ನಮಸ್ಕಾರ ಕಾರ್ಯಕ್ರಮ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಪ್ತ ಸಾಮೂಹಿಕ ನಮಸ್ಕಾರ ನಡೆಯುತ್ತಿದೆ.
Advertisement
Advertisement
ರಥ ಸಪ್ತಮಿ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಯುದುವಂಶದ ಯದುವೀರ್ ದಂಪತಿ ಅರಮನೆ ಆವರಣದಲ್ಲಿ ನಿಲ್ಲಿಸಿದ್ದ 8 ರಥಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ಆದ್ಯವೀರ್ ಜೊತೆ ಆಗಮಿಸಿ ರಥಸಪ್ತಮಿ ಆಚರಣೆ ಮಾಡಿದರು. ಅರಮನೆ ಆವರಣದಲ್ಲಿ ಶ್ರೀ ಭುವನೇಶ್ವರಿ, ಶ್ರೀ ತ್ರಿನೇಶ್ವರ ಸ್ವಾಮಿ ಶ್ರೀ ಲಕ್ಷ್ಮಿರಮಣ ಸ್ವಾಮಿ, ಶ್ರೀ ಮಹಾಲಕ್ಷ್ಮಿ ದೇವಿ, ಶ್ರೀ ಪ್ರಸನ್ನ ಕೃಷ್ಣ, ಶ್ರೀ ವೇದವರಹಸ್ವಾಮಿ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ಹಾಗೂ ಶ್ರೀ ಗಾಯಿತ್ರಿ ಅಮ್ಮನವರ ಉತ್ಸವ ಮೂರ್ತಿಗಳನ್ನು ಇಟ್ಟು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv