– ಬೆಂಗಳೂರು, ದೆಹಲಿ ವಿಮಾನ ನಿಲ್ದಾಣದಲ್ಲೂ ಸಮಸ್ಯೆ
– ಹೈದರಾಬಾದ್ ಏರ್ಪೋಟ್‌ನಲ್ಲಿ ಕೈಬರಹದಲ್ಲೇ ಬೋರ್ಡಿಂಗ್ ಪಾಸ್ ವಿತರಣೆ
ನವದೆಹಲಿ: ಮೈಕ್ರೋಸಾಫ್ಟ್ (Microsoft) ಸಾಫ್ಟ್‌ವೇರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ, ಸೂಪರ್‌ಮಾರ್ಕೆಟ್, ಬ್ಯಾಂಕಿಂಗ್ ಸೇರಿದಂತೆ ಅನೇಕ ವಲಯಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
Advertisement
ತಾಂತ್ರಿಕ ಸಮಸ್ಯೆಯಿಂದ ಭಾರತದ ಇಂಡಿಗೋ, ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ಬುಕಿಂಗ್, ಚೆಕ್-ಇನ್ ಮತ್ತು ಫ್ಲೈಟ್ ನವೀಕರಣಗಳ ಸೇವೆ ಮೇಲೆ ಪರಿಣಾಮ ಬೀರಿದೆ. ದೆಹಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣದಲ್ಲೂ ಸಮಸ್ಯೆ ತಲೆದೋರಿದೆ. ಸಮಸ್ಯೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್, ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ದೇವರು ನನ್ನನ್ನು ಕಾಪಾಡಿದ: ಹಂತಕನ ಗುಂಡೇಟಿನಿಂದ ಬಚಾವಾದ ಟ್ರಂಪ್ ಮಾತು
Advertisement
Advertisement
ತಾಂತ್ರಿಕ ಸಮಸ್ಯೆಯಿಂದಾಗಿ ಹೈದರಾಬಾದ್ ಏರ್ಪೋರ್ಟ್‌ನಲ್ಲಿ ಕೈಬರಹದಲ್ಲೇ ಬೋರ್ಡಿಂಗ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಲಂಡನ್ ಸ್ಟಾಕ್ ಎಕ್ಸ್‌ಚೇಂಜ್ ಸೇವೆಯಲ್ಲೂ ವ್ಯತ್ಯಯವಾಗಿದೆ. ಸ್ಕೈ ನ್ಯೂಸ್, ಆಸ್ಟ್ರೇಲಿಯಾದ ಎಬಿಸಿ ನ್ಯೂಸ್ ಪ್ರಸಾರ ಸ್ಥಗಿತಗೊಂಡಿದೆ. ಬ್ರಿಟನ್‌ನಲ್ಲೂ ರೈಲು ಸೇವೆ ಸ್ಥಗಿತವಾಗಿದೆ. ಭಾರತದ ಐಟಿ ಇಲಾಖೆಯಿಂದ ಮೈಕ್ರೋಸಾಫ್ಟ್ ಸಂಸ್ಥೆ ಜೊತೆ ಸಂಪರ್ಕ ಸಾಧಿಸಲಾಗುತ್ತಿದೆ.
Advertisement
ವಿಮಾನ ಕಾರ್ಯಾಚರಣೆಯ ಅಡೆತಡೆಗಳ ಕುರಿತು ನವೀಕರಣಗಳನ್ನು ಒದಗಿಸುವಲ್ಲಿ ನಾವು ಪ್ರಸ್ತುತ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಯಾವುದೇ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು ಎಂದು ಸ್ಪೈಸ್‌ಜೆಟ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ 32 ಮಂದಿ ಬಲಿ!
ದೆಹಲಿ ವಿಮಾನ ನಿಲ್ದಾಣವು ಕೆಲವು ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದೆ. ಜಾಗತಿಕ ಐಟಿ ಸಮಸ್ಯೆಯಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿನ ಕೆಲವು ಸೇವೆಗಳು ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ನಮ್ಮ ಪ್ರಯಾಣಿಕರಿಗೆ ಎದುರಾಗಿರುವ ಅನಾನುಕೂಲತೆಯನ್ನು ಕಡಿಮೆ ಮಾಡಲು ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದು ತಿಳಿಸಿದೆ.