ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ (Pahalgam Terror Attack) ಹಿಂದೂಗಳ (Hindu) ನರಮೇಧ ಮಾಡಿದ ಕೃತ್ಯದ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ (Saifullah Khalid) ಎನ್ನುವುದು ದೃಢಪಟ್ಟಿದೆ.
ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಆಗಿರುವ ಸೈಫುಲ್ಲಾ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ (Mumbai Attack) ಸೂತ್ರಧಾರ ಹಫೀಜ್ ಸಯೀದ್ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್ ಉಗ್ರರು ಭದ್ರತೆ ನೀಡುತ್ತಾರೆ. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು
ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡವುದರಿಂದ ಸೇನಾ ಅಧಿಕಾರಿಗಳ (Pakistan Army) ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ಪುರದಲ್ಲಿ ಪಾಕ್ ಸೇನೆಯ ದೊಡ್ಡ ಬೆಟಾಲಿಯನ್ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ.
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ
ಈ ಸಭೆಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆ ಜಂಟಿಯಾಗಿ ಆಯೋಜಿಸಿದ್ದವು. ಈತನ ಭಾಷಣ ಕೇಳಲು ಹೆಚ್ಚಿನ ಸಂಖ್ಯೆಯಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಭಯೋತ್ಪಾದಕರು ಸೇರಿದ್ದರು.
ಗುಪ್ತಚರ ವರದಿಯ ಪ್ರಕಾರ, ಕಳೆದ ವರ್ಷ ಅಬೋಟಾಬಾದ್ ಕಾಡುಗಳಲ್ಲಿ ಆಯೋಜಿಸಲಾದ ಭಯೋತ್ಪಾದಕ ಶಿಬಿರದಲ್ಲಿ ನೂರಾರು ಪಾಕಿಸ್ತಾನಿ ಹುಡುಗರು ಭಾಗವಹಿಸಿದ್ದರು. ಇದನ್ನು ಲಷ್ಕರ್-ಎ-ತೈಬಾದ ರಾಜಕೀಯ ವಿಭಾಗ ಪಿಎಂಎಂಎಲ್ ಮತ್ತು ಎಸ್‌ಎಂಎಲ್ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲೂ ಸೈಫುಲ್ಲಾ ಖಾಲಿದ್ ಭಾಗವಹಿಸಿದ್ದ. ಈ ಶಿಬಿರದಿಂದ ಭಯೋತ್ಪಾದಕ ದಾಳಿಗಳಿಗೆ ಹುಡುಗರನ್ನು ಆಯ್ಕೆ ಮಾಡಲಾಗಿತ್ತು. ಇಲ್ಲಿಯೂ ಸಹ ಸೈಫುಲ್ಲಾ ಅಲ್ಲಿದ್ದ ಹುಡುಗರನ್ನು ಭಾರತದ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಪ್ರಚೋದಿಸಿದ್ದ.
ಈ ಹುಡುಗರಿಗೆ ಭಯೋತ್ಪಾದಕ ತರಬೇತಿ ನೀಡಿದ ನಂತರ ಅವರನ್ನು ಪಾಕಿಸ್ತಾನಿ ಸೇನೆಯ ಸಹಾಯದಿಂದ ಭಾರತದ ಒಳಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
ಆಗಸ್ಟ್ 5, 2019 ರಂದು, ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಜಮ್ಮು ಮತ್ತು ಕಾಶ್ಮೀರದಿಂದ ವಿಧಿ 370 ಮತ್ತು 35A ಅನ್ನು ತೆಗೆದುಹಾಕಲಾಯಿತು. ಇದರ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಒಳಗೊಳ್ಳಲು ಐಎಸ್ಐ ಟಿಆರ್ಎಫ್ ಅಂದರೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಅನ್ನು ರಚಿಸಿದೆ.