ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇಬ್ಬರ ಪರವಾಗಿಯೂ ಹೊರಗಡೆ ಕೂಗು ಕೇಳಿ ಬರುತ್ತಿದೆ. ಹೀಗಿರುವಾಗ, ಡಿ.ಕೆ.ಶಿವಕುಮಾರ್ ಅವರಿಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಲಿಂಗಾಯತ ಮಠಾಧೀಶರ ಧರ್ಮ ಪರಿಷತ್ ಆಗ್ರಹಿಸಿದೆ.
ಈ ಬಾರಿ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಡಿ.ಕೆ.ಶಿವಕುಮಾರ್ ಅವರಿಗೇ ಸಿಎಂ ಸ್ಥಾನ ಕೊಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಶ್ರೀಶೈಲ, ಉಜ್ಜೈನಿ, ಕಾಶಿ ಸೇರಿದಂತೆ ಹತ್ತು ಮಠಗಳ ಮಠಾದೀಶರು ಪತ್ರ ಬರೆದಿದ್ದಾರೆ. ಶ್ರೀಶೈಲ, ಉಜ್ಜೈನಿ, ಕಾಶಿ ಸೇರಿದಂತೆ ಹತ್ತು ಮಠಗಳ ಮಠಾದೀಶರು ಪತ್ರ ಬರೆದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಚಿನ್ ಪೈಲೆಟ್‌ಗೆ ರಾಹುಲ್ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ
Advertisement
Advertisement
2023ರ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಬಹುಮತದೊಂದಿಗೆ ಗೆಲುವು ಸಾಧಿಸಲು ಡಿ.ಕೆ.ಶಿವಕುಮಾರ್ ತುಂಬಾ ಪರಿಶ್ರಮ ಪಟ್ಟಿದ್ದಾರೆ. ಚತುರತೆಯಿಂದ ಪಕ್ಷ ಸಂಘಟನೆ ಮಾಡಿ ಗೆಲುವಿಗೆ ಕಾರಣರಾಗಿದ್ದಾರೆ. ಕಾರ್ಯಕರ್ತರಲ್ಲಿ ಹುರುಪು ತುಂಬಿ ಕೆಲಸ ಮಾಡಿದರು. ಪಕ್ಷಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಹೀಗಾಗಿ ಅವರನ್ನು ಸಿಎಂ ಎಂದು ಘೋಷಿಸಬೇಕು ಎಂದು ಮಠಾಧೀಶರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
Advertisement
ಸಿದ್ದರಾಮಯ್ಯ ಹಿರಿಯ ನಾಯಕರು. ಕರ್ನಾಟಕದ ಜನಪ್ರಿಯ ನಾಯಕರಾಗಿರುವ ಅವರು ಈಗಾಗಲೇ ಒಂದು ಬಾರಿ ಸಿಎಂ ಆಗಿ ಪೂರ್ಣಾವಧಿ ಆಡಳಿತ ನಡೆಸಿದ್ದಾರೆ. ಈಗ ಅವರು ಪಕ್ಷದ ಇತರೆ ನಾಯಕರಿಗೆ ಮಾರ್ಗದರ್ಶನ ಮಾಡಬೇಕು. ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್‌ಗೇ ಕೊಡಿ ಎಂದು ಸಿದ್ದರಾಮಯ್ಯ ಅವರೇ ಹೇಳಿಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನೇ ಸಿಎಂ ಆಗಲಿದ್ದಾರೆ: ಕೆ.ಎನ್ ರಾಜಣ್ಣ
ಪಕ್ಷದ ಸಾಧನೆಯಲ್ಲಿ ಲಿಂಗಾಯತ ಸಮುದಾಯದವರ ಕೊಡುಗೆಯೂ ಅಪಾರವಿದೆ. ಕಾಂಗ್ರೆಸ್‌ನಲ್ಲಿ 39 ಲಿಂಗಾಯತರು ಶಾಸಕರಿದ್ದು, ಸಂಪುಟದಲ್ಲಿ ಸಮುದಾಯದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತೀರಿ ಎಂಬ ಭರವಸೆ ಇದೆ ಎಂದು ಮಠಾಧೀಶರು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.