ಚೆನ್ನೈ: 14 ವರ್ಷಗಳ ನಂತರ ಬೆಂಕಿ ಪೊಟ್ಟಣದ (matchbox) ಬೆಲೆ ಏರಿಕೆಯಾಗಿದೆ. ಡಿಸೆಂಬರ್ 1ರಿಂದ ಬೆಂಕಿಪೊಟ್ಟಣದ ಬೆಲೆ 2 ರೂಪಾಯಿ ಆಗಲಿದೆ. ತಮಿಳುನಾಡಿನ ಶಿವಕಾಶಿಯಲ್ಲಿ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಗಗನಕ್ಕೇರಿದ ಬೆನ್ನಲ್ಲೇ, ದಿನನಿತ್ಯ ಬಳಕೆಯ ಸಾಮಗ್ರಿಗಳ ಬೆಲೆಯಲ್ಲೂ ಹೆಚ್ಚಳವಾಗುತ್ತಲೇ ಇದೆ. ಆದರೆ ಕಳೆದ 14 ವರ್ಷಗಳಿಂದ ಬೆಂಕಿಪೊಟ್ಟಣದ ಬೆಲೆ ಮಾತ್ರ ಕಿಂಚಿತ್ತೂ ಏರಿಕೆಯಾಗದೆ ಸ್ಥಿರವಾಗಿತ್ತು.
Advertisement
Advertisement
ಈ ಹಿಂದೆ 50 ಪೈಸೆ ಇದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2007ರಲ್ಲಿ ಪರಿಷ್ಕರಿಸಲಾಗಿತ್ತು. ಆಗ ಬೆಂಕಿ ಪೊಟ್ಟಣದ ಬೆಲೆಯನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಗುರುವಾರ ಶಿವಕಾಶಿಯಲ್ಲಿ ಮುಕ್ತಾಯಗೊಂಡ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚೆಸ್ (All India Chamber Of Matches) ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಚ್ಚಾ ಸಾಮಗ್ರಿಗಳಲ್ಲಿ ಆಗುತ್ತಿರುವ ಬೆಲೆ ಹೆಚ್ಚಳವೇ ಈ ಬೆಲೆ ಏರಿಕೆಗೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್
Advertisement
Advertisement
ಬೆಲೆ ಏರಿಕೆಗೆ ಕಾರಣವೇನು?: ಬೆಂಕಿಕಡ್ಡಿಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಒಂದು ಕೆಜಿ ಕೆಂಪು ರಂಜಕ ರೂ. 425 ರಿಂದ ರೂ. 810 ಕ್ಕೆ, ಮೇಣ ರೂ. 58 ರಿಂದ ರೂ. 80 ಕ್ಕೆ, ಹೊರ ಬಾಕ್ಸ್ ಬೋರ್ಡ್ ರೂ. 36 ರಿಂದ ರೂ. 55 ಕ್ಕೆ ಮತ್ತು ಒಳ ಪೆಟ್ಟಿಗೆ ಬೋರ್ಡ್ ರೂ. 32 ರಿಂದ ರೂ. 58 ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಲೆಹೆಂಗಾದಲ್ಲಿ ಡ್ರಗ್ಸ್ ಇಟ್ಟು ಸಾಗಾಟ – ಹೈದರಾಬಾದ್ ಟು ಆಸ್ಟ್ರೇಲಿಯಾಗೆ ಸಪ್ಲೈ
ಅಕ್ಟೋಬರ್ 10 ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಉದ್ಯಮದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಹೀಗಾಗಿ ಬೆಂಕಿಪೊಟ್ಟಣ ತಯಾರಕರು ಬೆಲೆಯೇರಿಕೆಯ ನಿರ್ಧಾರವನ್ನು ಅವಿರೋಧವಾಗಿ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯ 600 ಬೆಂಕಿ ಪೊಟ್ಟಣಗಳ ಒಂದು ಬಂಡಲ್ 270ರಿಂದ 300 ರೂಪಾಯಿಗೆ ಮಾರಾಟವಾಗುತ್ತಿದೆ. ಅದನ್ನು 430ರಿಂದ 480 ರೂಪಾಯಿಗೆ ಏರಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಡಿಲೇ ಆಗಿದ್ದಕ್ಕೆ ಯಾವ ಮಾನಮರ್ಯಾದೆ ಹೋಗಲ್ಲ, ಬದನೆಕಾಯಿಯೂ ಆಗಿಲ್ಲ: ಸುದೀಪ್