ಚೆನ್ನೈ: 14 ವರ್ಷಗಳ ನಂತರ ಬೆಂಕಿ ಪೊಟ್ಟಣದ ಬೆಲೆ ಏರಿಕೆ ಆಗಿರುವ ಬೆನ್ನಲ್ಲೆ ಇದೀಗ ಪೊಟ್ಟಣದಲ್ಲಿ(matchbox) ಇರುವ ಕಡ್ಡಿಗಳ ಸಂಖ್ಯೆಯಲ್ಲೂ ಏರಿಕೆ ಮಾಡಲಾಗಿದೆ. ಡಿಸೆಂಬರ್ 1ರಿಂದ ಬೆಂಕಿ ಪೊಟ್ಟಣದ ಬೆಲೆ 1 ರೂಪಾಯಿನಿಂದ 2ರೂ.ಗೆ ಏರಿಕೆಯಾಗುತ್ತಿದ್ದು, ಬೆಲೆ ಹೆಚ್ಚಾದರೂ ಪೊಟ್ಟಣದಲ್ಲಿ ಬೆಂಕಿ ಕಡ್ಡಿಗಳು ಹೆಚ್ಚಿಗೆ ಸಿಗುತ್ತಿದೆ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ.
14 ವರ್ಷದ ನಂತರ ಬೆಲೆ ಹೆಚ್ಚಿಸುತ್ತಿದ್ದು, 2ರೂಪಾಯಿಯ ಪೊಟ್ಟಣದಲ್ಲಿ ಇನ್ಮುಂದೆ36 ಕಡ್ಡಿಗಳ ಬದಲು 50 ಕಡ್ಡಿಗಳು ಇರಲಿದೆ ಎಂದು ತಿಳಿಸಿವೆ. ಬೆಂಕಿ ಪೊಟ್ಟಣ ತಯಾರಿಕೆಗೆ ಬಳಸುವ 14 ಕಚ್ಚಾವಸ್ತುಗಳು ಬೆಲೆ ಏರಿಕೆ ಸಮೇತ ವಿವರ ನೀಡಿರುವ ಕಂನಿಗಳು ತಮ್ಮ ನಿರ್ಧಾರ ಸಮರ್ಥಿಸಿಕೊಂಡಿವೆ. ಇದನ್ನೂ ಓದಿ: ಲೆಹೆಂಗಾದಲ್ಲಿ ಡ್ರಗ್ಸ್ ಇಟ್ಟು ಸಾಗಾಟ – ಹೈದರಾಬಾದ್ ಟು ಆಸ್ಟ್ರೇಲಿಯಾಗೆ ಸಪ್ಲೈ
ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಗಗನಕ್ಕೇರಿದ ಬೆನ್ನಲ್ಲೇ, ದಿನನಿತ್ಯ ಬಳಕೆಯ ಸಾಮಗ್ರಿಗಳ ಬೆಲೆಯಲ್ಲೂ ಹೆಚ್ಚಳವಾಗುತ್ತಲೇ ಇದೆ. ಆದರೆ ಕಳೆದ 14 ವರ್ಷಗಳಿಂದ ಬೆಂಕಿ ಪೊಟ್ಟಣದ ಬೆಲೆ ಮಾತ್ರ ಕಿಂಚಿತ್ತೂ ಏರಿಕೆಯಾಗದೆ ಸ್ಥಿರವಾಗಿತ್ತು. ಈ ಹಿಂದೆ 50 ಪೈಸೆ ಇದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2007ರಲ್ಲಿ ಪರಿಷ್ಕರಿಸಲಾಗಿತ್ತು. ಆಗ ಬೆಂಕಿ ಪೊಟ್ಟಣದ ಬೆಲೆಯನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಗುರುವಾರ ಶಿವಕಾಶಿಯಲ್ಲಿ ಮುಕ್ತಾಯಗೊಂಡ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚೆಸ್ (All India Chamber Of Matches) ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಚ್ಚಾ ಸಾಮಗ್ರಿಗಳಲ್ಲಿ ಆಗುತ್ತಿರುವ ಬೆಲೆ ಹೆಚ್ಚಳವೇ ಈ ಬೆಲೆ ಏರಿಕೆಗೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್




