ಬಾಗಲಕೋಟೆ: ಜಗತ್ತಿನ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆ ಮಹಾದೇವಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮದ ಮತ್ತೊಂದು ಕೊಂಡಿ ಕಳಚಿದಂತಾಗಿದೆ. ರಾತ್ರಿ ವೇಳೆ ಆಗಮಿಸಿದ ಮಾತಾಜಿ ಪಾರ್ಥಿವ ಶರೀರವನ್ನು ಕೂಡಲಸಂಗಮ ಕ್ರಾಸ್ ಬಳಿ ಬರಮಾಡಿಕೊಂಡರು. ಬಸವಣ್ಣನವರ ವಚನಗಳ ಮೂಲಕ ಭಕ್ತಿಯ ಶ್ರದ್ಧಾಂಜಲಿ ಅರ್ಪಿಸಿದರು.
ಸಂಗಮಕ್ರಾಸ್ ನಿಂದ ಬಸವಣ್ಣನ ವೃತ್ತ ಮೂಲಕ ಬಸವ ಧರ್ಮಪೀಠ ವರೆಗೆ ಮೆರವಣಿಗೆ ಮಾಡಲಾಯಿತು. ದಾರಿಯುದ್ದಕ್ಕೂ ಅಪಾರ ಭಕ್ತರು ಮಾತಾಜಿ ಲಿಂಗೈಕ್ಯ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಮೊಂಬತ್ತಿ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
Advertisement
Advertisement
ನಂತರ ಬಸವಧರ್ಮ ಪೀಠ ವೇದಿಕೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು. ಬಸವಧರ್ಮ ನೂತನ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಸೇರಿದಂತೆ ಅನೇಕ ಸ್ವಾಮೀಜಿಗಳು ಮಾತಾಜಿ ಶರೀರಕ್ಕೆ ಪೂಜೆ ಸಲ್ಲಿಸಿದರು.
Advertisement
ರಾತ್ರಿಯಾದರೂ ಅಪಾರ ಭಕ್ತರು ತಾಯಿ ದರ್ಶನ ಪಡೆದು ಕಣ್ಣೀರಿಟ್ಟರು. ಮಾತೆ ಸತ್ಯಾದೇವಿ, ಮಹಾದೇಶ್ವರ ಸ್ವಾಮೀಜಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ, ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ ಹಾಗೂ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು, ಭಕ್ತ ಸಮೂಹ ಶೋಕ ಸಾಗರದಲ್ಲಿ ಮೊಳಗಿತ್ತು. ರಾತ್ರಿ ಇಡೀ ಶರಣರ ವಚನಗಳ ಭಜನೆ ಮಾಡಲಾಯಿತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv