ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ (Belagavi) ಬಾಣಂತಿಯರು, ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತನಿಖೆಗೆ ಆದೇಶಿಸಿದ್ದಾರೆ. ತನಿಖೆ ನಡೆಸಿ ವರದಿ ನೀಡಲು ಒಂದು ವಾರಗಳ ಡೆಡ್‌ಲೈನ್ ನೀಡಲಾಗಿದೆ.
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ ಬಾಣಂತಿಯರು, ಗರ್ಭಿಣಿಯರು, ಮಕ್ಕಳ ಸಾವು ಯಾವ ಕಾರಣಕ್ಕೆ ಆಗಿದೆ ಎಂದು ನೋಡುತ್ತಿದ್ದೇವೆ. ಬಳ್ಳಾರಿಯಲ್ಲಿ ನಡೆದ ಘಟನೆಯ ಸಮಗ್ರ ವರದಿಯನ್ನು ಕೇಳಿದ್ದೇವೆ. ಐವಿ ಫ್ಲೂಯಿಡ್‌ನಿಂದ (IV Fluid) ಆಗಿರಬಹುದು ಎಂದು ಕಂಪನಿ ಬಗ್ಗೆ ಕೂಡ ವಿಚಾರಣೆ ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ
Advertisement
Advertisement
ಪೌಷ್ಠಿಕಾಂಶದ ಕೊರತೆಯಿಂದ ಮಕ್ಕಳ ಸಾವಾಗಿದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, ಪೌಷ್ಠಿಕಾಂಶದ ವಿಚಾರವಾಗಿ ನಮ್ಮ ಇಲಾಖೆ ಆರೋಗ್ಯ ಇಲಾಖೆ ಜಂಟಿಯಾಗಿ ಪ್ರೋಟಿನ್ ಸಂಬಂಧ ಮೂರು ತಿಂಗಳ ಗರ್ಭಿಣಿ ಇದ್ದಾಗಿನಿಂದ ನೋಡುತ್ತಿದ್ದೇವೆ. ಬರೀ ಪೌಷ್ಠಿಕಾಂಶದಿಂದ ಸಾವಾಗಿದೆ ಎಂದು ಹೇಳಲು ಆಗಲ್ಲ. ಬೇರೆ ಕಾರಣ ಇರಬಹುದು. ಒಂದು ವಾರದ ಗಡುವು ಕೊಟ್ಟು ತನಿಖೆ ನಡೆಸಿ ವರದಿ ಕೊಡುವಂತೆ ಹೇಳುತ್ತೇವೆ. ಬೆಳಗಾವಿಯಲ್ಲಿ ಸಾವಿನ ಕುರಿತು ಕೂಡ ವರದಿ ಕೊಡುವಂತೆ ಕೇಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: 24 ಗಂಟೆಯಲ್ಲಿ 1,000 ಪುರುಷರೊಂದಿಗೆ ಸೆಕ್ಸ್ ಮಾಡುವ ಗುರಿ – ಹೊಸ ವರ್ಷಕ್ಕೆ 23ರ ಯುವತಿ ತಯಾರಿ!
Advertisement
Advertisement
ಪೌಷ್ಠಿಕ ಆಹಾರ ನೀಡುವಲ್ಲಿ ಯತ್ನಾಳ್ ಭ್ರಷ್ಟಾಚಾರ ಆರೋಪ ಹೊರಿಸಿದ ಕುರಿತು ಮಾತನಾಡಿ, ಸದನದಲ್ಲಿ ಹತ್ತು ಸಾರಿ ಚರ್ಚೆ ಆಗಿದೆ. ನಾವೇನು ಹೊಸದು ಮಾಡಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಮಾಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಈ ರೀತಿ ಆಗಿದೆ. 70,000 ಅಂಗನವಾಡಿಯಲ್ಲಿ ಏನೂ ದುರ್ಘಟನೆ ಆಗಿಲ್ಲ. ದೇವರ ಆಶೀರ್ವಾದದಿಂದ ಯಾವ ಮಕ್ಕಳ ಆರೋಗ್ಯ ಸಮಸ್ಯೆ ಆಗಿಲ್ಲ. ಎಲ್ಲಿಯಾದರೂ ಘಟನೆ ಆದರೆ, ಕಳಪೆ ಆಹಾರ ಏನಾದರೂ ಬಂದರೆ ನಮ್ಮ ಗಮನಕ್ಕೆ ತನ್ನಿ, ಸರಿಪಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಲಕನ ಮೇಲೆ ಬೀದಿ ನಾಯಿ ದಾಳಿ – ಹರಿದು ಹೋಯ್ತು ತುಟಿ