ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇದರಿಂದ ಎಚ್ಚೆತ್ತ ಜಿಲ್ಲಾ ಆರೋಗ್ಯ ಇಲಾಖೆ (District Health Department) ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪರಿಶೀಲನೆಗೆ ಮುಂದಾಗಿದೆ.
ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 10 ಬಾಣಂತಿಯರನ್ನು ಸಾವನ್ನಪ್ಪಿದ್ದು, ಇದೀಗ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪರಿಶೀಲನೆಗೆ ಮುಂದಾಗಿದ್ದು, ರಾಯಚೂರಿನ (Raichuru) ಕಲ್ಮಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (Primary Health Centre) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.ಇದನ್ನೂ ಓದಿ: ಲೋಕ್ ಅದಾಲತ್‌ನಲ್ಲಿ 73,628 ಪ್ರಕರಣ ಇತ್ಯರ್ಥ – ನ್ಯಾ.ಪ್ರಕಾಶ ಬನಸೋಡೆ
ಬಾಣಂತಿಯರ ಆರೋಗ್ಯವನ್ನು ವಿಚಾರಿಸಿದ ಅಧಿಕಾರಿಗಳು ಆಸ್ಪತ್ರೆಯ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ಬಾಣಂತಿಯರು ಹೆರಿಗೆಯಾದ ನಂತರ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಚಳಿಗಾಲ ಇರುವ ಕಾರಣ ಸಣ್ಣಮಕ್ಕಳನ್ನು ಸಹ ಬೆಚ್ಚಗೆ ಇರುವಂತೆ ನೋಡಿಕೊಳ್ಳಬೇಕು. ಏನಾದರೂ ತೊಂದರೆ ಉಂಟಾದಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಬೇಕು ಎಂದು ಸಲಹೆ ನೀಡಿದರು.
ಇನ್ನೂ ಆಸ್ಪತ್ರೆಗೆ ಬರುವ ಸಾರ್ವಜನಿಕರು, ಗರ್ಭಿಣಿ, ಬಾಣಂತಿ ಮತ್ತು ನವಜಾತ ಶಿಶುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಈ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಇದನ್ನೂ ಓದಿ: Mumbai Boat Accident | ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್ ಡಿಕ್ಕಿ; 13 ಮಂದಿ ದಾರುಣ ಸಾವು