– ಬ್ಲಾಕ್‌ಲಿಸ್ಟ್ ಕಂಪನಿಯಿಂದ ಔಷಧಿ ಸರಬರಾಜು – ಮೆಡಿಕಲ್ ಮಾಫಿಯಾ ಎಂದ ಅಶೋಕ್
ಬೆಳಗಾವಿ: ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ ಎಂದು ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಪ್ರತಿಕ್ರಿಯಿಸಿದ್ದಾರೆ.
ಪರಿಷತ್‌ನಲ್ಲಿ ಮಾತನಾಡಿದ ಅವರು, ನ.11ರಂದು ಬಳ್ಳಾರಿ (Ballary) ಆಸ್ಪತ್ರೆಯಲ್ಲಿ ತಾಯಂದಿರ ಸಾವು ವರದಿಯಾಗಿದೆ. 34 ಸಿಸೇರಿಯನ್ ಆಪರೇಷನ್‌ನಲ್ಲಿ 7 ಪ್ರಕರಣಗಳಲ್ಲಿ ತೊಂದರೆ ಆಗಿದೆ. ಮೂತ್ರಪಿಂಡ ತೊಂದರೆ, ಬಹು ಅಂಗಾಂಗ ವೈಫಲ್ಯತೆದಿಂದ 7 ಪ್ರಕರಣಗಳಲ್ಲಿ 5 ಬಾಣಂತಿಯರು ಸಾವಿಗೀಡಾಗಿದ್ದಾರೆ. 2 ಬಾಣಂತಿಯರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಿಂಗರ್ ಲ್ಯಾಕ್ವೆಟ್ ದ್ರಾವಣ ಮಾದರಿ ಪರೀಕ್ಷೆಯಲ್ಲಿ ನಿರ್ಲಕ್ಷ್ಯತೆ ತೋರಿರುವ ಔಷಧಿ ನಿಯಂತ್ರಕರಾದ ಡಾ.ಉಮೇಶ್‌ರನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಸ್ಪೇಸ್‌ನಲ್ಲೇ ಕ್ರಿಸ್ಮಸ್ ಸಂಭ್ರಮ – ಸಾಂತಾಕ್ಲಾಸ್ ಆದ ಸುನಿತಾ ವಿಲಿಯಮ್ಸ್!
ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಡ್ರಗ್ ಕಂಪನಿ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಡ್ರಗ್ ಕಂಟ್ರೋಲರ್ ಜನರ್ ಅಫ್ ಇಂಡಿಯಾಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಇದೇ ವೇಳೆ ಸಚಿವರು ಉತ್ತರ ನೀಡುತ್ತಿದ್ದಂತೆ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಮಾತನಾಡಿ, ಬ್ಲ್ಯಾಕ್ ಲಿಸ್ಟ್‌ಗೆ ಹಾಕಿದ ಕಂಪನಿಯಿಂದ ಹೇಗೆ ಸಪ್ಲೈ ಮಾಡಿಕೊಂಡಿದ್ದೀರಿ ಎಂದು ಪ್ರಶ್ನಿಸಿದರು. ಜೊತೆಗೆ ವಿಧಾನಸಭೆಯಲ್ಲಿ ಆರ್.ಅಶೋಕ್ ಮಾತನಾಡಿ, ಇದು ಮೆಡಿಕಲ್ ಮಾಫಿಯಾ, ಬಾಣಂತಿಯರ ಸಾವಿಗೆ ಸರ್ಕಾರ ಕಾರಣ ಎಂದು ಕಿಡಿಕಾರಿದರು.ಇದನ್ನೂ ಓದಿ: NDA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು 2.08 ಲಕ್ಷ ಕೋಟಿ ಅನುದಾನ: ಸಂಸದ ಕೆ.ಸುಧಾಕರ್