ಕಲಬುರಗಿ: ಇತ್ತೀಚಿಗೆ ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ (Maternal Deaths Case) ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ, ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ (GIMS Hospital) ಬಾಣಂತಿಯ ಹೊಟ್ಟೆಯಲ್ಲಿ ಬಟ್ಟೆಯ ಉಂಡೆಯನ್ನೇ ಬಿಟ್ಟು ವೈದ್ಯರು ಪ್ರಮಾದ ಮಾಡಿದ ಘಟನೆ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬಾಣಂತಿಯ ಸಾವಾಗಿದೆ.
Advertisement
ನಗರದ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ (ESIC Hospital) ಲೋ ಬಿಪಿಯಿಂದ ಬಾಣಂತಿಯ ಸಾವಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತ ದುರ್ದೈವಿ. ಇದನ್ನೂ ಓದಿ: ಹೇಯ್ಲಿ ಮ್ಯಾಥ್ಯೂಸ್, ಬ್ರಂಟ್ ಫಿಫ್ಟಿ ಆಟ – ಯುಪಿ ವಿರುದ್ಧ ಮುಂಬೈಗೆ 8 ವಿಕೆಟ್‌ಗಳ ಜಯ
Advertisement
Advertisement
ಸೋಮವಾರ ಹೇರಿಗೆಗೆಂದು ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದರು. ನಿರಂತರ ರಕ್ತ ನೀಡಿದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹೈವೇಯಲ್ಲಿ ಸರಣಿ ಅಪಘಾತ – ಈಶಾಗೆ ಬಂದಿದ್ದ ವಾಹನ ಸವಾರರ ಪರದಾಟ