ಬೆಂಗಳೂರು: ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಲಾಗಿದೆ.
2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕೊಡುವ ಘೋಷಣೆ ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.
ಅಲ್ಲದೇ, ಎಡಿಬಿ ನೆರವಿನಡಿ 40 ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್‌ಗಳ ಅಭಿವೃದ್ಧಿ, 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಿವಿಗಳಲ್ಲಿ 1000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
31 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿರುವ ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು. 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಪದವಿ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು ಎಂದಿದ್ದಾರೆ.

